crime news : ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಮೇಲೆ ಪೊಲೀಸರು ಗುಂಡು ಹೊಡೆದಿದ್ದಾರೆ
crime news : ಏನಿದು ಪ್ರಕರಣ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ ಎಂಬುವವರ ಕತ್ತು ಸೀಳಿ ಕೊಲೆಮಾಡಲಾಗಿತ್ತು. ಈ ಹಿನ್ನಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಇಂದು ಆ ಪ್ರಕರಣದಲ್ಲಿ ಭಾಗಿಯಾಗಿದ್ದ ಮಂಜ ಎಂಬ ಆರೋಪಿಯ ಇರುವಿಕೆಯನ್ನು ತಿಳಿದುಕೊಂಡ ಪೊಲೀಸರು ಆತನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಆತ ಪೊಲೀಸ್ ಸಿಬ್ಬಂಧಿಯಾದ ಹರೀಶ್ ಎಂಬುವವರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಬಳಿಕ ಹಿಡಿದು ಆಸ್ಪತ್ರೆಗೆ ದಾಖಲಿಸಿದ್ದಾರೆ.