ಮಲೆನಾಡು ಟುಡೆ ಸುದ್ದಿ / ಸಾಗರ / ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಂಟಗೋಡು ಗ್ರಾಮದ ಬಳಿ ಭಾನುವಾರ ಮಧ್ಯಾಹ್ನದ ಅಪಘಾತವೊಂದು ಸಂಭವಿಸಿದೆ. ಈ ಘಟನೆಯಲ್ಲಿ ಹುಬ್ಬಳ್ಳಿಯಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ದರ್ಶನಕ್ಕೆ ತೆರಳುತ್ತಿದ್ದ ಕುಟುಂಬವೊಂದು ಗಾಯಗೊಂಡಿದೆ. ಟಾಟಾ ಸುಮೋ ಕ್ರೂಸರ್, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ, ಘಟನೆ ಸಂಭವಿಸಿದೆ.
ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಘಟನೆ ನಡೆದ ತಕ್ಷಣವೇ ಅಲ್ಲಿನ ಸ್ಥಳೀಯರು ಗಾಯಾಳುಗಳನ್ನ ರಕ್ಷಣೆ ಮಾಡಿ ಸಾಗರ ಟೌನ್ ಆಸ್ಪತ್ರೆಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಿ ಕಳುಹಿಸಿಕೊಟ್ಟಿದ್ದಾರೆ. ಗಾಯಾಳುಗಳು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದು, ಒಬ್ಬರನ್ನ ಮಾತ್ರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ ವಾಹನವನ್ನ ಸ್ಥಳಾಂತರಿಸಿದ್ದಾರೆ.
ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
