Cs shadakshari : ಷಡಾಕ್ಷರಿಯವರೇ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಬಿಜೆಪಿ ಸೇರಿಕೊಳ್ಳಿ : ಹೆಚ್ ಸಿ ಯೋಗೇಶ್
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಬಿಜೆಪಿಯ ಸದಸ್ಯ ರರೀತಿ ನಡೆದುಕೊಳ್ಳುತ್ತಿದ್ದಾರೆ. ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿಕೊಳ್ಳಲಿ ಎಂದು ಮಾಜಿ ಮಹಾನಗರ ಪಾಲಿಕೆ ಸದಸ್ಯ ಹೆಚ್ ಸಿ ಯೋಗೇಶ್ ಆರೋಪಿಸಿದರು.
ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಆಗಸ್ಟ್ 5 ರಂದು ವಿಕಾಸ ಕೇಂದ್ರದಲ್ಲಿ ಸಂಸದ ಬಿ ವೈ ರಾಘವೇಂದ್ರ ಹುಟ್ಟು ಹಬ್ಬದ ವಿಚಾರವಾಗಿ ಪೂರ್ವ ಭಾವಿ ಸಭೆ ನಡೆದಿತ್ತು. ಆ ಸಭೆಯಲ್ಲಿ ಅಚ್ಚರಿ ಎಂಬಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಖುದ್ದು ಹಾಜರಿದ್ದು ಸಭೆಯಲ್ಲಿ ಕಾರ್ಯಕ್ರಮದ ವಿಚಾರವಾಗಿ ಚರ್ಚೆ ನಡೆಸಿದರು. ಈ ಹಿಂದೆ ಷಡಾಕ್ಷರಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗುವ ಮೊದಲು ಬಿ.ಎಸ್. ಯಡಿಯೂರಪ್ಪ ಹಾಗೂ ರಾಘವೇಂದ್ರ ಆಪ್ತ ಸಹಾಯಕರಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಅಧ್ಯಕ್ಷರಾದ ಬಳಿಕವೂ ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಇತರೆ ಬಿಜೆಪಿ ನಾಯಕರೊಡನೆ ಗುರುತಿಸಿಕೊಳ್ಳುತ್ತಿದ್ದಾರೆ ಇದು ಸರಿಯಲ್ಲ.
ಷಡಾಕ್ಷರಿಯವರೇ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರ ಸಮಸ್ಯೆ ಬಹಳಷ್ಟಿದೆ. ನೀವು ಅಧ್ಯಕ್ಷ ಸ್ಥಾನದಲ್ಲಿ ಇದ್ದು ಅದನ್ನು ಮೊದಲು ಸರಿಯಾಗಿ ನಿರ್ವಹಿಸಿ. ಇಲ್ಲದಿದ್ದರೆ ಬಿಜೆಪಿಯಲ್ಲಿ ಸದಸ್ಯತ್ವವನ್ನು ತೆಗೆದುಕೊಂಡು ನೌಕರರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದರು.



