ಶಿವಮೊಗ್ಗ : ಹಾಲಿನ ದರ ಇಳಿಸದಿದ್ದರೆ ಸರ್ಕಾರ ವಿಸರ್ಜಿಸಿ ಮರು ಚುನಾವಣೆ ಎದುರಿಸಿ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸವಾಲು

ಹಂಚಿಕೊಳ್ಳಿ
WhatsApp Facebook X Telegram
Cut Milk Rates or Face Re-Elections
Cut Milk Rates or Face Re-Elections

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ರಾಜ್ಯ ಸರ್ಕಾರ ಏರಿಸಿರುವ ಹಾಲಿನ ದರವನ್ನು ಇಳಿಸಬೇಕು ಇಲ್ಲದಿದ್ದರೆ ಸರ್ಕಾರವನ್ನು ವಿಸರ್ಜನೆ ಮಾಡಿ ಪುನಃ ಚುನಾವಣೆಯನ್ನು ಎದುರಿಸಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದರು.

ಇಂದು ಶಿವಮೊಗ್ಗದ ಗೋಪಿ ವೃತ್ತದಲ್ಲಿ ಹಾಲಿನ ಬೆಲೆ ಏರಿಕೆ ವಿರೋಧಿಸಿ ರಾಷ್ಟ್ರಭಕ್ತ ಬಳಗದ ಮಹಿಳಾ ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ವೋಟ್ ಪಡೆದು ಅಧಿಕಾರಕ್ಕೆ ಬಂದಿತು. ಆದರೆ ಈಗ ಅದನ್ನು ಯಶಸ್ವಿಗೊಳಿಸುವಲ್ಲಿ ವಿಫಲವಾಗಿದೆ. ಆದ್ದರಿಂದ ಆ ನಷ್ಟವನ್ನು ಭರಿಸಲು ಹಾಲಿನ ದರವನ್ನು ಏರಿಕೆ ಮಾಡಿದೆ. ಹಾಲಿನ ದರ ಏರಿಕೆಯಿಂದ ಮೊಸರು, ತುಪ್ಪದ ದರಗಳು ಸಹ ಏರಿಕೆಯಾಗಿ ಜನಸಾಮಾನ್ಯರು ಕಷ್ಟಪಡುವಂತಾಗಿದೆ ಎಂದರು.

ರಾಜ್ಯ ಸರ್ಕಾರ ಈ ಕೂಡಲೇ ಹಾಲಿನ ದರವನ್ನು ಕಡಿಮೆ ಮಾಡಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿದೆ ಎನಿಸಿದ್ದರೆ, ಸರ್ಕಾರವನ್ನು ವಿಸರ್ಜಿಸಿ ಮರು ಚುನಾವಣೆಗೆ ಬನ್ನಿ ಎಂದು ಅವರು ಸವಾಲು ಹಾಕಿದರು.

ಮಹಿಳಾ ಘಟಕದಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ ನಗರದ ದೈವಜ್ಞ ಕಲ್ಯಾಣ ಮಂದಿರದಿಂದ ಹೊರಟ ಮೆರವಣಿಗೆಯು ದುರ್ಗಿಗುಡಿ ಮುಖ್ಯ ರಸ್ತೆಯ ಮುಖಾಂತರ ಗೋಪಿ ವೃತ್ತವನ್ನು ಸೇರಿತು. ಈ ಸಂದರ್ಭದಲ್ಲಿ ನೂರಾರು ಮಹಿಳೆಯರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರಭಕ್ತ ಬಳಗದ ಪ್ರಮುಖರಾದ ಕೆ.ಎಸ್. ಈಶ್ವರಪ್ಪ ಹಾಗೂ ಕೆ.ಇ. ಕಾಂತೇಶ್ ಅವರು ಮಕ್ಕಳಿಗೆ ಹಾಲಿನ ಪ್ಯಾಕೆಟ್ ವಿತರಿಸುವ ಮೂಲಕ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಸಾರಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor