ಬಿಜೆಪಿಗರು ಬಾನು ಮುಷ್ತಾಕ್​ರನ್ನು ವಿರೋಧಿಸಲು ಇದೇ ಕಾರಣ : ಏನದು, ಆಯನೂರು ಮಂಜುನಾಥ್​ ಹೇಳಿದ್ದೇನು

prathapa thirthahalli
Prathapa thirthahalli - content producer

Dasara : ಶಿವಮೊಗ್ಗ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಬಿಜೆಪಿ ವಿರೋಧಿಸುತ್ತಿರುವುದು ಅವರು ಅಲ್ಪಸಂಖ್ಯಾತರು ಎಂಬ ಕಾರಣಕ್ಕಲ್ಲ, ಬದಲಾಗಿ ಅವರು ಮಹಿಳೆ ಎಂಬ ಕಾರಣಕ್ಕೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದರು. ಆಗ ಬಿಜೆಪಿ ವಿರೋಧಿಸಿರಲಿಲ್ಲ. ಆದರೆ, ಇದೀಗ ಬೂಕರ್​ ಪ್ರಶಸ್ತಿ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುವ ಭಾನು ಮುಷ್ತಾಕ್ ಅವರನ್ನು ವಿರೋಧಿಸುತ್ತಿರುವುದು ಅವರು ಮಹಿಳೆ  ಎಂಬ ಕಾರಣದಿಂದ ಎಂದು ಆರೋಪಿಸಿದರು. 1927ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಜೊತೆಗೆ ಮಿರ್ಜಾ ಇಸ್ಮಾಯಿಲ್ ಅವರನ್ನು ಅಂಬಾರಿ ಮೇಲೆ ಕೂರಿಸಿಕೊಂಡು ಗೌರವಿಸಿದ್ದರು. 

- Advertisement -

ಯಾವುದೋ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಅವರನ್ನು ವಿರೋಧಿಸಿ, ಆ ವಿಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ಹಾಗಿದ್ದರೆ, ಈ ಹಿಂದೆ ಕುವೆಂಪು ಮತ್ತು ಶಿವರುದ್ರಪ್ಪ ಅವರಂತಹ ಕವಿಗಳು ದೇವರನ್ನು ನಂಬುತ್ತಿರಲಿಲ್ಲ. ಅವರನ್ನೂ ವಿರೋಧಿಸುತ್ತೀರಾ ಎಂದು ಮಂಜುನಾಥ್ ಪ್ರಶ್ನಿಸಿದರು. ಇಂತಹ ವಿಚಾರಗಳಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಹೇಳಿದರು.

Dasara

TAGGED:
Share This Article
Leave a Comment

Leave a Reply

Your email address will not be published. Required fields are marked *