D. B. Chandregowda | ಹಿರಿಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ | ಅಪರೂಪದ ರಾಜಕಾರಣಿಯ ಜೀವನ ಹೇಗಿತ್ತು ಓದಿ?

DB Chandragowda is no more / He died at his residence in Daradahalli, Mudigere taluk. ಡಿ.ಬಿ.ಚಂದ್ರೇಗೌಡ ಇನ್ನಿಲ್ಲ /   ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ಅವರು ಸಾವನ್ನಪ್ಪಿದ್ದಾರೆ.

D. B. Chandregowda | ಹಿರಿಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ | ಅಪರೂಪದ ರಾಜಕಾರಣಿಯ ಜೀವನ ಹೇಗಿತ್ತು ಓದಿ?

KARNATAKA NEWS/ ONLINE / Malenadu today/ Nov 7, 2023 SHIVAMOGGA NEWS

Chikkamagaluru |   ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಡಿ.ಬಿ.ಚಂದ್ರೇಗೌಡರವರು ನಿಧನರಾಗಿದ್ದಾರೆ. ನಿನ್ನೆ ರಾತ್ರಿ 12 ಗಂಟೆಯ ನಂತರ ಅವರ ನಿಧನದ ವಾರ್ತೆ ಹೊರಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆ  ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ಅವರು ಸಾವನ್ನಪ್ಪಿದ್ದಾರೆ. 



ಚಂದ್ರೇಗೌಡರಿಗೆ 87 ವರ್ಷ ವಯಸ್ಸಾಗಿತ್ತು ಮಲೆನಾಡಿನ ರಾಜಕಾರಣದಲ್ಲಿ ತಮ್ಮದೇ ವಿಚಾರಗಳನ್ನ ಹೊಂದಿದ್ದ ಚಂದ್ರೇಗೌಡರು ಇಂದಿರಾಗಾಂಧಿ ಯವರಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದರು. 



ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ ಶ್ರೀಮತಿ ಪುಟ್ಟಮ್ಮನವರ ಮಗ ಡಿಬಿ ಚಂದ್ರೇಗೌಡ.  1936 ರ ಆಗಸ್ಟ್ 26ರಂದು ಜನಿಸಿದ್ದ ಇವರು  1971ರಲ್ಲಿ ಚಿಕ್ಕಮಗಳೂರು ಸಂಸದರಾಗಿದ್ದರು. 1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾದಾಗ ಕ್ಷೇತ್ರ ಬಿಟ್ಟುಕೊಟ್ಟಿದ್ದರು

ದೇವರಾಜು ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. 1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದರು . 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಎರಡನೇ ಸಲ ಶಾಸಕರಾಗಿದ್ರು. 1999 ಶೃಂಗೇರಿಯಿಂದ ಗೆದ್ದು ಎಸ್​ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ರು. 2009 ರಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ರು. 

READ : ಇದ್ದಕ್ಕಿದ್ದ ಹಾಗೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು!

ಪತ್ನಿ ಶ್ರೀಮತಿ ಪೂರ್ಣಿಮಾ, ನಾಲ್ವರು ಪುತ್ರಿಯರನ್ನ ಡಿ.ಬಿ.ಚಂದ್ರೇಗೌಡರು ಅಗಲಿದ್ದಾರೆ. ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ. ಬಳಿಕ ನಾಳೆ ಬುಧವಾರ  ದಾರದಹಳ್ಳಿಯಲ್ಲಿರುವ ಚಂದ್ರೇಗೌಡರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.