shivamogga Mar 16, 2024 ಲೋಕಸಭಾ ಚುನಾವಣೆ- 2024 ಗೆ ದಿನಾಂಕ ನಿಕ್ಕಿಯಾಗಿದೆ. ಶಿವಮೊಗ್ಗದಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಯವರು ಸುದ್ದಿಗೋಷ್ಟಿ ನಡೆಸಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಅಂಕಿಅಂಶಗಳನ್ನು ನೀಡಿದ್ದಾರೆ.
ಲೋಕಸಭೆ ಚುನಾವಣೆಯು ಶಿವಮೊಗ್ಗ ಜಿಲ್ಲೆಯಲ್ಲಿ 3ನೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ ಅವರು, ಶಿಮೇ 7 ರಂದು ಶಿವಮೊಗ್ಗದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಏಪ್ರಿಲ್ 22 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ ಲೋಕಸಭಾ ಕ್ಷೇತ್ರದಲ್ಲಿ 8.52,107 ಪುರುಷ, 8,77,761 ಮಹಿಳೆಯರು ಸೇರಿದಂತೆ ಒಟ್ಟು 17,29,901 ಮತದಾರರಿದ್ದಾರೆ. ಇದರಲ್ಲಿ 29,788 ಮೊದಲ ಬಾರಿ ಮತ ಚಲಾಯಿಸುವ ಮತದಾರರಿದ್ದಾರೆ ಎಂದು ತಿಳಿಸಿದರು.
ಒಟ್ಟಾರೆ ಜಿಲ್ಲೆಯಲ್ಲಿ 2039 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಲೋಕಸಭೆ ಕ್ಷೇತ್ರಕ್ಕೆ 3217 ಬ್ಯಾಲೆಟ್ ಯೂನಿಟ್, 2215 ಕಂಟ್ರೋಲ್ ಯೂನಿಟ್ ಹಾಗೂ 2340 ವಿವಿ ಪ್ಯಾಟ್ ಬಳಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 8 ಸಾವಿರಕ್ಕೂ ಅಧಿಕ ಅಧಿಕಾರಿ- ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ದಲ್ಲಿ ಒಟ್ಟು 325 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 87 ಅತಿಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ. ಇನ್ನೂ ಚುನಾವಣಾ ಭದ್ರತೆಗೆ ಸಂಬಂಧಿಸಿದಂತೆ ಪೊಲೀಸ್ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದ್ದು, ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದಿದ್ದಾರೆ.
.
