ಶಿವಮೊಗ್ಗ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ, ಮಹಿಳೆಯರ ಬೃಹತ್ ಪ್ರತಿಭಟನೆ

ಹಂಚಿಕೊಳ್ಳಿ
WhatsApp Facebook X Telegram
Death Penalty for Rapists Women Protest smg 
Death Penalty for Rapists Women Protest smg 

Death Penalty for Rapists ಶಿವಮೊಗ್ಗ : ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ಅತ್ಯಾಚಾರಿಗಳಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ಗಲ್ಲು ಶಿಕ್ಷೆ ವಿಧಿಸುವಂತಹ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಜಿಲ್ಲಾ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಗುರುವಾರ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ : ಮಹಿಳಾ ಕಲಾವಿದರಿಗೆ ಇಲ್ಲಿದೆ ನೋಡಿ ಸುವರ್ಣಾವಕಾಶ, ಪ್ರಥಮ ಬಹುಮಾನ 8 ಸಾವಿರ, ಏನಿದು ಸ್ಪರ್ಧೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ನೂರಾರು ಮಹಿಳೆಯರು, ದೇಶ ಹಾಗೂ ರಾಜ್ಯದಲ್ಲಿ ಮಹಿಳೆಯರ ವಿರುದ್ಧದ ಹಿಂಸಾಚಾರ ಮತ್ತು ಹತ್ಯೆ ಪ್ರಕರಣಗಳು ದಿನೇ ದಿನೇ ಏರುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆಯ ಅಂಕಿಅಂಶಗಳ ಪ್ರಕಾರ ಸಾವಿರಾರು ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದು, ನ್ಯಾಯ ವಿಳಂಬವಾಗುತ್ತಿರುವುದು ಅಪರಾಧಿಗಳಿಗೆ ಭಯವಿಲ್ಲದಂತಾಗಿದೆ ಎಂದರು.

ಕೇವಲ ಕಾನೂನು ಜಾರಿಯಷ್ಟೇ ಅಲ್ಲದೆ, ಮಹಿಳಾ ಸಂಘಟನೆಗಳ ಸಹಭಾಗಿತ್ವದೊಂದಿಗೆ ವಿಶೇಷ ಕಾರ್ಯಯೋಜನೆಯನ್ನು ರೂಪಿಸಿ ಮಹಿಳೆಯರು ಮತ್ತು ಮಕ್ಕಳು ಸಮಾಜದಲ್ಲಿ ಮುಕ್ತವಾಗಿ ಭಯವಿಲ್ಲದೆ ಬದುಕುವ ವಾತಾವರಣ ನಿರ್ಮಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Death Penalty for Rapists Women Protest smg 

Death Penalty for Rapists Women Protest smg 
Death Penalty for Rapists Women Protest smg 
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor