ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಇದೇ ಡಿಸೆಂಬರ್ 12ರ ಶುಕ್ರವಾರದಂದು ಕಾಲಭೈರವ ಜನ್ಮಾಷ್ಟಮಿ (Kalabhairava Janmashtami )ಪ್ರಯುಕ್ತ ವಿಜೃಂಭಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಠದ ವತಿಯಿಂದ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಹೋಮ ಹಾಗೂ ಪಲ್ಲಕ್ಕಿ ಉತ್ಸವ ಆಯೋಜಿಸಲಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗದ ಪುರೋಹಿತರ ಕೈ ಹಿಡಿದ ಅಹಮದಾಬಾದ್ ಯುವತಿ, ನೆಂಟಸ್ಥನ ಬೆಳೆದಿದ್ದು ಹೇಗೆ
ವಿವಿಧ ಅಭಿಷೇಕ, ಪೂಜೆ
ಜನ್ಮಾಷ್ಟಮಿ ಆಚರಣೆಯ ಅಂಗವಾಗಿ, ಡಿಸೆಂಬರ್ 12 ರಂದು ಬೆಳಿಗ್ಗೆ 5:30ಕ್ಕೆ ಆದಿಚುಂಚನಗಿರಿ ಮಠದ ನಾದಮಯಾನಂದನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ವಿಶೇಷ ಪೂಜೆ ಆರಂಭಗೊಳ್ಳಲಿದೆ. ಕಾಲಭೈರವೇಶ್ವರ ಸ್ವಾಮಿಗೆ ಜಲಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, 108 ಎಳನೀರಿನ ಅಭಿಷೇಕ ಮತ್ತು ಭಸ್ಮಾಭಿಷೇಕದಂತಹ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.Kalabhairava Janmashtami

ಅಭಿಷೇಕ ಕಾರ್ಯಕ್ರಮಗಳು ಮುಗಿದ ನಂತರ, ಸ್ವಾಮಿಗೆ ವಿಶೇಷವಾಗಿ ಹೂವಿನ ಅಲಂಕಾರವನ್ನು ಮಾಡಲಾಗುತ್ತದೆ. ಬೆಳಿಗ್ಗೆ 7:30ಕ್ಕೆ ಮಹಾಮಂಗಳಾರತಿಯು ನೆರವೇರಲಿದೆ. ತದನಂತರ ನೆರೆದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿದೆ.
ಸಂಜೆ ಹೋಮ ಮತ್ತು ಪಲ್ಲಕ್ಕಿ ಉತ್ಸವ
ಸಂಜೆ 4:30ಕ್ಕೆ ಕಾಲಭೈರವ ಹೋಮ ಆರಂಭವಾಗಲಿದ್ದು, 6:30ಕ್ಕೆ ಪೂರ್ಣಾಹುತಿಯೊಂದಿಗೆ ಹೋಮವು ಸಮಾಪ್ತಿಯಾಗಲಿದೆ. ಪೂರ್ಣಾಹುತಿಯ ಬಳಿಕ ಶ್ರೀರಾಮಪ್ರಿಯ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮವು ನೆರವೇರಲಿದೆ. ಸಂಜೆ 7:00 ಗಂಟೆಗೆ ಶ್ರೀ ಕಾಲಭೈರವೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಉತ್ಸವದ ನಂತರ ಮಹಾಮಂಗಳಾರತಿ ನೆರವೇರಲಿದೆ. ರಾತ್ರಿ 8 ಗಂಟೆಗೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯ ವ್ಯವಸ್ಥೆಯನ್ನು ಮಾಡಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಲಭೈರವೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಮಠದ ಆಡಳಿತ ಮಂಡಳಿಯು ಕೋರಿದೆ.

ಶಿವಮೊಗ್ಗದಲ್ಲಿ ವಿಜಯ್ ಮರ್ಚೆಂಟ್ ಟ್ರೋಫಿ: 36 ತಂಡಗಳ ನಡುವೆ ಕ್ರಿಕೆಟ್ ಸಮರಕ್ಕೆ ವೇದಿಕೆ ಸಿದ್ಧ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,
