ವರುಣಾರ್ಭಟ : ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ರಜೆ! ವಿವರ ಹೀಗಿದೆ

ಹಂಚಿಕೊಳ್ಳಿ
WhatsApp Facebook X Telegram
Shivamogga Monsoon Report Karnataka Rain Report Shivamogga Records 81mm Rain,
Shivamogga Monsoon Report

Sagara Hosanagara Thirthahalli / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಈ ಕಾರಣದಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು ಮಂಗಳವಾರದ ಮಟ್ಟಿಗೆ ರಜೆ ಪ್ರಕಟಿಸಲಾಗಿದೆ. ಜಿಲ್ಲೆಯ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆಯಾ ತಾಲೂಕುಗಳ ಆಡಳಿತವು ಅಧಿಕೃತ ಆದೇಶ ಹೊರಡಿಸಿದೆ.

ಸಾಗರ ತಾಲೂಕಿನಲ್ಲಿ ಕೇವಲ ಶಾಲೆಗಳಿಗೆ ಮಾತ್ರ ರಜೆಘೋಷಣೆ ಮಾಡಲಾಗಿದೆ. ಸಾಗರ ತಾಲೂಕು ತಹಶೀಲ್ದಾರ್ ಆಗಿರುವ ಪ್ರತಿಭಾ ಅವರು ಈ ಕುರಿತು ಆದೇಶ ನೀಡಿದ್ದಾರೆ. ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಾತ್ರ ಮಂಗಳವಾರ ರಜೆ ಅನ್ವಯವಾಗಲಿದೆ ತಾಲೂಕಿನಲ್ಲಿರುವ ಪದವಿಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು ಹಾಗೂ ಡಿಪ್ಲೋಮಾ ತರಗತಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಲ್ಲಿ ಎಲ್ಲಾ ಹಂತದ ಶೈಕ್ಷಣಿಕ ಸಂಸ್ಥೆಗಳಿಗೆ ಸಂಪೂರ್ಣ ರಜೆಯನ್ನು ಘೋಷಿಸಲಾಗಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ಭರತ್ ರಾಜ್ ಅವರು ಆದೇಶ ಹೊರಡಿಸಿದ್ದು, ತಾಲೂಕಿನಾದ್ಯಂತ ಕಾರ್ಯನಿರ್ವಹಿಸುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಹಾಗೂ ಕಾಲೇಜುಗಳಿಗೆ ಮಂಗಳವಾರದ ದಿನದ ಮಟ್ಟಿಗೆ ರಜೆಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ತೀರ್ಥಹಳ್ಳಿ ತಾಲೂಕಿನಲ್ಲಿಯೂ ತಹಶೀಲ್ದಾರ್ ರಂಜಿತ್ ಈ ಬಗ್ಗೆ ಸೂಚನೆ ನೀಡಿದ್ದು ಇಂದು ಶಾಲೆ ಹಾಗೂ ಕಾಲೇಜು ಬಂದ್ ಇರಲಿದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor