ಸ್ಟೇಷನ್​ ಲಿಮಿಟ್ಸ್​ ನಲ್ಲಿ ಡೆಕಾಯ್​ ಟೀಂ ಎಂಟ್ರಿ! ಅಧಿಕಾರಿಗಳಿಗೆ ಎಚ್ಚರಿಕೆಯ ಸೂಚನೆ ಕೊಟ್ಟ ಎಸ್​ಪಿ ಮಿಥುನ್ ಕುಮಾರ್! ಏನಿದು?

Decoy team enters station limits! SP Mithun Kumar issues warning to officials

ಸ್ಟೇಷನ್​ ಲಿಮಿಟ್ಸ್​ ನಲ್ಲಿ ಡೆಕಾಯ್​ ಟೀಂ ಎಂಟ್ರಿ! ಅಧಿಕಾರಿಗಳಿಗೆ ಎಚ್ಚರಿಕೆಯ ಸೂಚನೆ ಕೊಟ್ಟ ಎಸ್​ಪಿ ಮಿಥುನ್ ಕುಮಾರ್! ಏನಿದು?
Decoy team enters station limits! SP Mithun Kumar issues warning to officials

SHIVAMOGGA  |  Dec 23, 2023  |  ಶಿವಮೊಗ್ಗ ಎಸ್​​ಪಿ ಮಿಥನ್ ಕುಮಾರ್ ಜಿ.ಕೆ ಐಪಿಎಸ್ ರವರು ನಿನ್ನೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು  ಮತ್ತು ಗುಪ್ತ ಮಾಹಿತಿ ಕರ್ತವ್ಯ ನಿರ್ವಹಿಸುವ ಸಿಬ್ಬಂಧಿಗಳ ಸಭೆ ನಡೆಸಿದ್ದಾರೆ.. ಈ ವೇಳೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧ ಚಟುವಟಿಕೆ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ರು

ಎಸ್​ಪಿ ಮಿಥುನ್ ಕುಮಾರ್



1) ಓಸಿ, ಮಟ್ಕಾ, ಇಸ್ಪೀಟು ಜೂಜಾಟಗಳನ್ನು ತಡೆಗಟ್ಟಲು, ಠಾಣಾಧಿಕಾರಿಗಳು ಮತ್ತು ಗುಪ್ತ ಮಾಹಿತಿ ಕರ್ತವ್ಯದ ಸಿಬ್ಬಂದಿಗಳು ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಳ ಮಟ್ಟದ ಮಾಹಿತಿಯನ್ನು ಸಂಗ್ರಹಿಸಿ,  ಹೆಚ್ಚಿನ ದಾಳಿಗಳನ್ನು ನಡೆಸಿ, ಆರೋಪಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು

ಮತ್ತು ಓಸಿ ಬರೆಯುವ ಹಾಗೂ ಓಸಿ ಆಡಿಸುವ ಕಿಂಗ್ ಪಿನ್ ಗಳನ್ನು ಪತ್ತೆ ಹಚ್ಚಿ ಠಾಣೆಗೆ ಕರೆತಂದು  ಅವರ ವಿರುದ್ಧ ಬಲವಾದ ಪ್ರಕರಣಗಳನ್ನು ದಾಖಲಿಸಿ, ಪುನಾಃ ಓಸಿ ಮಟ್ಕಾ ಜೂಜಾಟದಲ್ಲಿ ತೊಡಗದಂತೆ ಬಿಗಿ ಮಾಡಬೇಕು

ಮತ್ತು ಶಿವಮೊಗ್ಗ ಜಿಲ್ಲೆಯಾದ್ಯಂತ ವಿಶೇಷವಾಗಿ ಶಿವಮೊಗ್ಗ ನಗರದಲ್ಲಿ ಸಂಘಟಿತ ಅಪರಾಧಗಳ ವಿರುದ್ಧ ಶೂನ್ಯ ಸಹಿಷ್ಣುತೆ (Zero Tolerance) ಹೊಂದಿದ್ದು, ಸಾರ್ವಜನಿಕರು ಮತ್ತು ಮಾದ್ಯಮಗಳಿಂದ ಯಾವುದೇ ದೂರುಗಳು ಬಂದಾಗ ಕೂಡಲೇ ಸ್ಪಂದಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. 

READ : Arecanut Rate?  Dec 22, 2023 ಇವತ್ತು ಅಡಿಕೆ ದರ ಎಷ್ಟಿದೆ ! ವಿವಿಧ ಮಾರುಕಟ್ಟೆಗಳ ವಿವರ!

2) ಪೊಲೀಸ್ ಅಧಿಕಾರಿ /  ಸಿಬ್ಬಂಧಿಗಳು ಓಸಿ, ಮಟ್ಕಾ, ಇಸ್ಪೀಟು ಜೂಜಾಟವನ್ನು ತಡೆಗಟ್ಟದೇ ಇದ್ದಲ್ಲಿ ಹಾಗೂ ತಮ್ಮ ಬೇಜವಾಬ್ದಾರಿತನ ಮತ್ತು ನಿರ್ಲಕ್ಷತನದಿಂದ ಓಸಿ, ಮಟ್ಕಾ, ಇಸ್ಪೀಟು ಜೂಜಾಟಗಳು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವುದು ಕಂಡು ಬಂದಲ್ಲಿ ಮತ್ತು ಜಿಲ್ಲಾ ಪೊಲೀಸ್ ಕಛೇರಿಯಿಂದ ಡೆಕಾಯ್ (ಮಾರುವೇಶದಲ್ಲಿ) ಟೀಮ್ ಗಳನ್ನು ಕಳುಹಿಸಿದ ಸಂದರ್ಭದಲ್ಲಿ ಯಾವ ಠಾಣಾ ವ್ಯಾಪ್ತಿಯಲ್ಲಿ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರುವುದು ಕಂಡು ಬರುತ್ತದೆಯೋ ಆ ಠಾಣೆಗಳ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳೇ ನೇರ ಹೊಣೆಗಾರರಾಗಿರುತ್ತಾರೆ.  ಅಂತಹ ಅಧಿಕಾರಿ /  ಸಿಬ್ಬಂಧಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಇಲಾಖಾ ಶಿಸ್ತಿನ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ 

3)  ಮುಂದಿನ 10  ದಿನಗಳಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುವವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ಹೆಚ್ಚಿನ ದಾಳಿಗಳನ್ನು ನಡೆಸಿ NDPS ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸತಕ್ಕದ್ದು.  ಹಾಗೆಯೇ ಗಾಂಜಾ ಸೇವನೆ ಪ್ರಕರಣದಲ್ಲಿ ಗಾಂಜಾದ ಮೂಲದ ಬಗ್ಗೆ  ಮಾಹಿತಿಯನ್ನು ಸಂಗ್ರಹಿಸಿ, ಆ ವ್ಯಕ್ತಿಗೆ ಗಾಂಜಾ ಮಾರಾಟ ಮಾಡಿದ ಮತ್ತು ಗಾಂಜಾ ಬೆಳೆದ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು.

4) ಕಾನೂನು  ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ, ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಜೆಯ ವೇಳೆ ಏರಿಯಾ ಡಾಮಿನೇಷನ್ ವಿಶೇಷ ಗಸ್ತು ಮಾಡಿ, ಅನುಮಾನಾಸ್ಪದ ಮತ್ತು ಸಾರ್ವಜನಿಕ ಉಪಟಳ ನೀಡುವ ವ್ಯಕ್ತಿಗಳ ವಿರುದ್ಧ ಮುಂಜಾಗ್ರತಾ ಪ್ರಕರಣ ಮತ್ತು ಲಘು ಪ್ರಕರಣಗಳನ್ನು ದಾಖಲಿಸತಕ್ಕದ್ದು ಹಾಗೂ ಗಾಂಜಾ ಸೇವನೆಮಾಡಿರುವ ಬಗ್ಗೆ ಅನುಮಾನ ಬಂದವರನ್ನು ವೈಧ್ಯಕೀಯ ಪರೀಕ್ಷೆಗೆ ಒಳಪಡಿಸಿ, ಗಾಂಜಾ ಸೇವನೆ ಮಾಡಿರುವ ಬಗ್ಗೆ ದೃಡಪಟ್ಟಾಗ ಅಂತಹವರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ  ಅನಿಲ್ ಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ  ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ ಹಾಗೂ ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು