ದೀಪಾವಳಿ ವಿಶೇಷ: ಯಶವಂತಪುರ-ತಾಳಗುಪ್ಪ ಮಾರ್ಗದಲ್ಲಿ ಎಕ್ಸ್‌ಪ್ರೆಸ್‌ ರೈಲು ಸೇವೆ ವಿಸ್ತರಣೆ

prathapa thirthahalli
Prathapa thirthahalli - content producer

Deepavali  Special Train ಶಿವಮೊಗ್ಗ :  ದೀಪಾವಳಿ ಸಂದರ್ಭದಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಸಂತಸದ ಸುದ್ದಿಯನ್ನು ಪ್ರಕಟಿಸಿದೆ. ಯಶವಂತಪುರ ಮತ್ತು ತಾಳಗುಪ್ಪ ನಡುವೆ ಓಡಾಡುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದ್ದು, ಈ ರೈಲು ಪ್ರತಿ ದಿಕ್ಕಿನಲ್ಲಿ ತಲಾ ಎರಡು ಟ್ರಿಪ್‌ಗಳನ್ನು ಪೂರ್ಣಗೊಳಿಸಲಿದೆ.

Deepavali  Special Train : ವಿಶೇಷ ರೈಲುಗಳ ಸಂಚಾರದ ವೇಳಾಪಟ್ಟಿ

ರೈಲು ಸಂಖ್ಯೆ 06587 ರ ಯಶವಂತಪುರ-ತಾಳಗುಪ್ಪ ಎಕ್ಸ್‌ಪ್ರೆಸ್ ವಿಶೇಷ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30 ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಡಲಿದೆ. ಮರುದಿನ ಮುಂಜಾನೆ 4.15 ಕ್ಕೆ ಅದು ತಾಳಗುಪ್ಪ ನಿಲ್ದಾಣವನ್ನು ತಲುಪಲಿದೆ.

- Advertisement -

ಅದೇ ರೀತಿ, ರೈಲು ಸಂಖ್ಯೆ 06588 ರ ತಾಳಗುಪ್ಪ-ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಅಕ್ಟೋಬರ್ 18 ಮತ್ತು 25 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಪ್ರಯಾಣ ಆರಂಭಿಸಿ, ಅದೇ ದಿನ ಸಂಜೆ 5.15 ಕ್ಕೆ ಯಶವಂತಪುರ ನಿಲ್ದಾಣವನ್ನು ತಲುಪಲಿದೆ.

ಯಶವಂತಪುರ-ತಾಳಗುಪ್ಪ ವಿಶೇಷ ರೈಲು, ಹೋಗುವ ಮತ್ತು ಬರುವ ಎರಡೂ ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಬೋಗಿಗಳ ವಿವರ

ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳು ಇರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್, ಹತ್ತು ಸ್ಲೀಪರ್ ಕ್ಲಾಸ್, ಐದು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾಗನ್‌ಗಳು ಸೇರಿವೆ ಎಂದು ಮೈಸೂರು ವಿಭಾಗದ ವಿಭಾಗೀಯ ಹಣಕಾಸು ವ್ಯವಸ್ಥಾಪಕ ಪೃಥ್ವಿ ಎಸ್. ಹುಲ್ಲತ್ತಿ ಅವರು ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *