ಪಕ್ಷವನ್ನ ಬೆಂಬಲಿಸಿದ್ದೀವಿ, ದುಡಿದಿದ್ದೀವಿ, ನಮ್ಮವರಿಗೆ ಕೊಡಿ ಆ ಸ್ಥಾನ! ಮುಸ್ಲಿಮ್​ ಸಮುದಾಯದ ಬೇಡಿಕೆ!

ಹಂಚಿಕೊಳ್ಳಿ
WhatsApp Facebook X Telegram
Muslim Community Member
Muslim Community Member

Muslim Community Member / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕಾಂಗ್ರೆಸ್ ಅನ್ನು ಸದಾ ಬೆಂಬಲಿಸುತ್ತಾ ಬಂದಿರುವ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸಯ್ಯದ್ ಮುಜೀಬುಲ್ಲ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯವು ದಶಕಗಳಿಂದ ಕಾಂಗ್ರೆಸ್ ಬೆನ್ನೆಲುಬಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಹೆಚ್ಚು ಸ್ಥಾನಗಳನ್ನು ಗೆದ್ದು, ಸುಭದ್ರ ಸರ್ಕಾರ ರಚನೆಯಾಗಲು ಮುಸ್ಲಿಂ ಸಮುದಾಯದ ಕೊಡುಗೆ ಅಪಾರವಾಗಿದೆ.

ಹಾಗೆಯೇ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಡೆದಿರುವಂತಹ 68 ಸಾವಿರ ಮತಗಳಲ್ಲಿ 50 ಸಾವಿರಗಳಿಗಿಂತ ಹೆಚ್ಚು ಮತಗಳನ್ನು ಮುಸ್ಲಿಂ ಸಮುದಾಯವು ನೀಡಿದ್ದು, ಕಾಂಗ್ರೆಸ್ ಇಲ್ಲಿ ಗೌರವಯುತವಾದ ಮತಗಳನ್ನು ಪಡೆಯಲು ಕಾರಣಿ ಭೂತವಾಗಿದೆ ಎಂದರು. ಕಾಂಗ್ರೆಸ್‌ಗೆ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯ ಬೆಂಬಲವಿದ್ದರೂ ಇಲ್ಲಿವರೆಗೂ ಯಾವುದೇ ಅವಧಿಯಲ್ಲಿ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ.

ಹಾಗಾಗಿ ಮೊದಲ ಅವಧಿಯಲ್ಲಿ ಅಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ಸಿಕ್ಕಿದೆ. ಈಗ ಪಕ್ಷ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಿಗಮ ಮಂಡಳಿಯ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತಿದ್ದು, ಮುಂದಿನ ಅವಧಿಯಲ್ಲಿಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವಿಭಾಗಗಳಲ್ಲಿ ಪ್ರಾಮಾಣಿಕ ವಾಗಿ ಸೇವೆ ಸಲ್ಲಿಸಿರುವ ಪಕ್ಷದ ಕಾರ್ಯಕರ್ತರಾಗಿರುವ ಹಾಗೂಸಮುದಾಯದ ವಿವಿಧಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿರುವ ಯುವ ನಾಯಕ ಮೊಹಮ್ಮದ್ ಆರಿಫ್‌ ಉಲ್ಲಾ ರವರನ್ನು ಸೂಡಾ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ವರಿಷ್ಠರಿಗೆ ಒತ್ತಾಯಿಸಿದರು. ಗೋಷ್ಟಿಯಲ್ಲಿ ವೇದಿಕೆ ಪ್ರಮುಖರಾದ ಟಿ. ಜಪ್ಪುಲ್ಲಾ, ಸಾದಿಕ್, ನೂರುಲ್ಲಾ ಖಾನ್, ಸೈಯದ್ ಉಮ್ಮರ್, ಇರ್ಫಾನ್ ಖಾನ್, ಶಫಿವುಲ್ಲಾ, ಜಬೀವುಲ್ಲಾ ಇದ್ದರು.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor