ಸಹ್ಯಾದ್ರಿ ಕಾಲೇಜಿನ ಮುಂದೆ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ! ವಿವರ ಹೀಗಿದೆ

ಹಂಚಿಕೊಳ್ಳಿ
WhatsApp Facebook X Telegram
Demand to Resume Postgraduate Admissions in Sahyadri Colleges Shivamogga
Demand to Resume Postgraduate Admissions in Sahyadri Colleges Shivamogga

Sahyadri Colleges Shivamogga / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಇವತ್ತು ವಿದ್ಯಾರ್ಥಿ ಸಂಘಟನೆ ಎಬಿವಿಪಿ ಪ್ರತಿಭಟನೆ ನಡೆಸಿದೆ. ಸ್ನಾತಕೋತ್ತರ ಪ್ರವೇಶ ಪುನರಾರಂಭಿಸಬೇಕು ಎಂಬ ಬೇಡಿಕೆಯನ್ನು ಒಳಗೊಂಢು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದೆ.

ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಪ್ರತಿಭಟನೆ

ಸಹ್ಯಾದ್ರಿ ಕಾಲೇಜಿನಲ್ಲಿ ಎಂಎಸ್ಸಿ ಮತ್ತು ಎಂಎ ಸ್ನಾತಕೋತ್ತರ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ನಿಲ್ಲಿಸಿರುವುದು ಸರಿಯಲ್ಲ, ಈ ಕೋರ್ಸ್​ಗಳನ್ನ ತಕ್ಷಣವೇ ಆರಂಭಿಸಬೇಕು. ಅಲ್ಲದೆ ಡಿಜಿಟಲ್ ಮೌಲ್ಯ ಮಾಪನ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಬೇಕು. ಸಂಗ್ರಹವಾಗಿರುವ ಕ್ರೀಡಾ ಶುಲ್ಕವನ್ನು ಕ್ರೀಡಾ ಚಟುವಟಿಕೆಗಳಿಗೆ ಬಳಸಬೇಕು. ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್ ಸೌಲಭ್ಯ ನೀಡಬೇಕು. ಅನೇಕ ವರ್ಷಗಳಿಂದ ನಿಂತಿರುವ ಘಟಿಕೋತ್ಸವವನ್ನು ಪುನಃ ನಡೆಸಬೇಕು ಎಂಬುದು ವಿದ್ಯಾರ್ಥಿ ಸಂಘಟನೆಯ ಬೇಡಿಕೆಯಾಗಿತ್ತು.

ಇದೇ ವೇಳೆ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ವಿದ್ಯಾರ್ಥಿ ಮುಖಂಡರು ಎಚ್ಚರಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಎಬಿವಿಪಿ ಮಹಾನಗರ ಕಾರ್ಯದರ್ಶಿ ಹೆಚ್.ಎಸ್. ನಿರಂಜನ್ ಸೇರಿದಂತೆ ಹಲವರಿದ್ದರು.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor