ನೀತಿ ಸಂಹಿತೆ ಉಲ್ಲಂಘನೆ ವಿಚಾರದಲ್ಲಿ ಮಹತ್ವದ ಸೂಚನೆ ಕೊಟ್ಟ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ

Deputy Commissioner Dr R Selvamani issues important instructions on violation of model code of conduct

ನೀತಿ ಸಂಹಿತೆ ಉಲ್ಲಂಘನೆ ವಿಚಾರದಲ್ಲಿ ಮಹತ್ವದ ಸೂಚನೆ ಕೊಟ್ಟ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ
ನೀತಿ ಸಂಹಿತೆ ಉಲ್ಲಂಘನೆ ವಿಚಾರದಲ್ಲಿ ಮಹತ್ವದ ಸೂಚನೆ ಕೊಟ್ಟ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ

ನೀತಿ ಸಂಹಿತೆ ಉಲ್ಲಂಘನೆ ಹಾಗೂ ಚುನಾವಣಾ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಆರ್​.ಸೆಲ್ವಮಣಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ  ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ನಿಯೋಜಿತ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಹಾಗೂ ರಜಾ ದಿನಗಳಂದು ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು  ಸೂಚನೆ ನೀಡಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ ಸಿದ್ದತೆ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿ ನೀಡಿರುವ ಸೂಚನೆಗಳು

ಎಲ್ಲ ಚುನಾವಣಾಧಿಕಾರಿಗಳು ಮತಗಟ್ಟೆಗಳಿಗೆ ತೆರಳಿ ಮತಗಟ್ಟೆಗಳ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆ ಕುರಿತು ಈಗಲೇ ಸಮರ್ಪಕವಾದ ಯೋಜನೆ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು. ಪ್ರತಿ ಮತಗಟ್ಟೆಗೆ ಪಂಚಾಯಿತಿ ಅಥವಾ ಇತರೆ ಸ್ಥಳೀಯ ಸಂಸ್ಥೆಗಳಿಂದ ಒಬ್ಬರನ್ನು ನಿಯೋಜಿಸಬೇಕು. ಇಓ, ಚೀಫ್ ಆಫೀಸರ್, ಪಿಡಿಓ ಗಳು ಮತಗಟ್ಟೆಗಳು ಹಾಗೂ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ/ಸಿಬ್ಬಂದಿಗಳ ಎಲ್ಲ ರೀತಿಯ ಮೂಲಭೂತ ವ್ಯವಸ್ಥೆಗಳ ಕುರಿತು ನಿಗಾ ವಹಿಸಿ, ಮುತುವರ್ಜಿಯಿಂದ ವ್ಯವಸ್ಥೆ ಮಾಡಬೇಕು. 

ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು, ಚುನಾವಣಾ ಸಿಬ್ಬಂದಿಗಳಿಗೆ ನೀರು, ಊಟದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಯೋಜಿತ ಅಧಿಕಾರಿಗಳು ಮಾಡಬೇಕು. ಕೆಲವು ದೂರದ ಹಳ್ಳಿಗಳಲ್ಲಿ ಕುಡಿಯುವ ನೀರು ಇತರೆ ಸೌಕರ್ಯಗಳು ಇರುವುದಿಲ್ಲ. ಅಲ್ಲಿ ಹೆಚ್ಚಿನ ಕಾಳಜಿ ವಹಿಸಿ ವ್ಯವಸ್ಥೆ ಮಾಡಬೇಕು. ಹಾಗೂ  ಕ್ಲಸ್ಟರ್ ಮತಗಟ್ಟೆ ಅಂದರೆ ಮೂರು ಮತ್ತು ಹೆಚ್ಚು ಮತಗಟ್ಟೆ ಇರುವೆಡೆ ಪೆಂಡಾಲ್ ಸೇರಿದಂತೆ ಮೂಲಭೂತ ಸೌಕರ್ಯ ಸಮರ್ಪಕವಾಗಿರುವಂತೆ ನಿಗಾ ವಹಿಸಬೇಕು.

ಇಓ, ಚೀಫ್ ಆಫೀಸರ್, ಪಿಡಿಓ ಗಳು ಎಲ್ಲ ಮತಗಟ್ಟೆಗಳಲ್ಲಿ ಎಎಂಎಫ್(ಅಶ್ಯೂರಡ್ ಮಿನಿಮಮ್ ಫೆಸಿಲಿಟಿಸ್) ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು. ಹಾಗೂ ಚುನಾವಣಾಧಿಕಾರಿಗಳು ಪೋಸ್ಟಲ್ ಬ್ಯಾಲಟ್ ಬಗ್ಗೆ ಅತ್ಯಂತ ಸೂಕ್ಷ್ಮವಾಗಿ ಕಾರ್ಯ ನಿರ್ವಹಿಸಬೇಕೆಂದರು.

ನಾಮಪತ್ರ ಸಲ್ಲಿಕೆಗೆ ಅಗತ್ಯವಾದ ತಯಾರಿಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ನಾಮಪತ್ರ ಸ್ವೀಕರಿಸುವ ಕುರಿತು ಚುನಾವಣಾಧಿಕಾರಿಗಳು ನಿಯಮಗಳು, ಮಾರ್ಗಸೂಚಿಗಳನ್ನು ಮತ್ತೊಮ್ಮೆ ಓದಿ, ತಿಳಿದುಕೊಂಡು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಬೇಕು. ಮಸ್ಟರಿಂಗ್ ಕೇಂದ್ರಗಳು ಹಾಗೂ ಇದಕ್ಕೆ ಸಂಬಂಧಿಸಿದ ಸಿಬ್ಬಂದಿಗಳು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮತದಾರರ ಗುರುತಿನ ಚೀಟಿಗಳ ವಿತರಣೆಯನ್ನು ಸಮರ್ಪಕವಾಗಿ ಮಾಡಬೇಕು. ಹೊಸ ಹಾಗೂ ಉಳಿದ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲು ಶೀಘ್ರವೇ ಕ್ರಮ ಜರುಗಿಸುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಲೋಖಂಡೆ,  ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿಎಸ್‍ಟಿ ಮತ್ತು ಇತರೆ ತಂಡಗಳು ತಮ್ಮ ತಮ್ಮ ಕರ್ತವ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಮತದಾನ ಜಾಗೃತಿಗಾಗಿ ಎಲ್ಲ ಹಳ್ಳಿಗಳಲ್ಲಿ ಕಸ ಸಂಗ್ರಹ ವಾಹನಗಳಲ್ಲಿ ಮತದಾನ ಮಹತ್ವ-ಅರಿವು ಮೂಡಿಸುವ ಜಿಂಗಲ್‍ಗಳನ್ನು ಹಾಕಬೇಕು. ಹಾಗೂ ಸ್ವೀಪ್ ಚಟುವಟಿಕೆಗಳನ್ನು ಸಕ್ರಿಯಗೊಳಿಸಿ ಮತದಾನ ಜಾಗೃತಿ ಮೂಡಿಸಬೇಕು. ಕಳೆದ ಬಾರಿ ಕಡಿಮೆ ಮತದಾನ ಆದ ಮತಕ್ಷೇತ್ರಗಳಲ್ಲಿ ಹೆಚ್ಚಿನ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga karnataka assembly election,karnataka assembly election 2023,karnataka election 2023,karnataka election,karnataka elections,karnataka vidhan sabha election 2023,karnataka election news,karnataka assembly elections,karnataka elections 2023,karnataka assembly elections 2023,karnataka,karnataka election 2018,karnataka politics,karnataka latest news,karnataka news,2023 assembly election,assembly election 2023,election commission,2023 election