ಹೆಚ್ಚುತ್ತಿರುವ ಸೋಂಕು! ಕೋವಿಡ್​-19 ಕುರಿತು ಜಿಲ್ಲೆಯ ಜನರಿಗೆ ಜಿಲ್ಲಾಧಿಕಾರಿ ಮಹತ್ವದ ಐದು ಸೂಚನೆ

Deputy Commissioner issues five important instructions to the people of the district on COVID-19

ಹೆಚ್ಚುತ್ತಿರುವ ಸೋಂಕು! ಕೋವಿಡ್​-19 ಕುರಿತು ಜಿಲ್ಲೆಯ ಜನರಿಗೆ ಜಿಲ್ಲಾಧಿಕಾರಿ ಮಹತ್ವದ ಐದು ಸೂಚನೆ

SHIVAMOGGA  |  Dec 26, 2023  |    ಶಿವಮೊಗ್ಗದಲ್ಲಿಯು ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಈ ಸಂಬಂಧ ಕೋವಿಡ್ ಮುನ್ಸೂಚನೆ ಕ್ರಮಗಳನ್ನು ಪಾಲಿಸುವಂತೆ ಡಿಸಿ ಆರ್​ ಸೆಲ್ವಮಣಿ ಮನವಿ ಮಾಡಿದ್ದಾರೆ. 

ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ 

ಕೋವಿಡ್-19 ರ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡುತ್ತಾ ಬಂದಿದ್ದೇವೆ. ಆದರೂ ಪ್ರಸ್ತುತ ಕೇರಳ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು, ಕೇರಳ ರಾಜ್ಯದಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ, ಚಳಿಗಾಲದ ಹವಾಮಾನ, ಕ್ರಿಸ್‍ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ ತಿಳಿಸಿದ್ದಾರೆ.

ಕೋವಿಡ್-19

60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.

ಜ್ವರ, ಕೆಮ್ಮು, ನೆಗಡಿ ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ  ವೈದ್ಯಕೀಯ ಸಲಹೆಯನ್ನು ಪಡೆಯಬೆಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.

ಉತ್ತಮ ವೈದ್ಯಕೀಯ ಸ್ವಚ್ಛತೆ ಆಗ್ಗಾಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು ಇತ್ಯಾದಿಗಳ ಪಾಲನೆಗಳು ಅಗತ್ಯವಾಗಿದೆ.

READ : ಶಿವಮೊಗ್ಗವೂ ಸೇರಿದಂತೆ ಯಾವ್ಯಾವ ತಾಲ್ಲೂಕು ನಲ್ಲಿ ಎಷ್ಟಿದೆ ಅಡಿಕೆ ದರ! ವಿವರ ಇಲ್ಲಿದೆ

ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಹಿರಿಯ ನಾಗರೀಕರು/ದುರ್ಬಲರು/ ಆರೋಗ್ಯ ಸಮಸ್ಯೆಗಳನ್ನು ಹೊಂದಿದವರನ್ನು ಅವಶ್ಯವಿದ್ದರೆ ಮಾತ್ರ ಭೇಟಿ ನೀಡುವುದು. ಜನಸಂದಣಿ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.

ಅಂತರಾಷ್ಟ್ರೀಯ ಪ್ರಯಾಣ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೇರಿದಂತೆ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಪಾಲಿಸುವಂತೆಜಿಲ್ಲಾಧಿಕಾರಿಗಳಾದ ಡಾ. ಆರ್ ಸೆಲ್ವಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.