Devil release date ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್.ಡೆವಿಲ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್
ದರ್ಶನ್ ಅಭಿನಯದ ಡೆವಿಲ್ ಚಿತ್ರದ ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ಇದರ ನಡುವೆ ಚಿತ್ರತಂಡ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು ಚಿತ್ರದ ರಿಲೀಸ್ ಡೇಟ್ ಅನ್ನು ಘೋಷಿಸಿದೆ.
ಹೌದು ದರ್ಶನ ಅಭಿನಯದ ಡೆವಿಲ್ ಚಿತ್ರ 2025 ರ ಡಿಸೆಂಬರ್ 12 ರಂದು ರಾಜ್ಯಾಧ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರದ ನಿರ್ಮಾಣ ಸಂಸ್ಥೆ ಜೈಮಾತಾ ಕೈಂಬೆನ್ಸ್ ತನ್ನ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದೆ.
ಕಳೆದ ವರ್ಷವೇ ಕ್ರಿಸ್‌ಮಸ್‌ಗೆ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೆಲವು ಕಾರಣಾಂತರಗಳಿಂದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿತ್ತು. ಈ ಬಾರಿಯೂ ಚಿತ್ರತಂಡ ಡಿಸೆಂಬರ್ ತಿಂಗಳಿನಲ್ಲಿಯೇ ಚಿತ್ರವನ್ನು ತೆರೆಗೆ ತರಲು ಸಜ್ಜಾಗಿದೆ.
