SHIVAMOGGA NEWS / ONLINE / Malenadu today/ Nov 24, 2023 NEWS KANNADA
Shivamogga | Malnenadutoday.com ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕು|| ಧನುಶ್ರೀಗೆ ಪ್ರಥಮ ಸ್ಥಾನ ಲಭಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು, ಪದವಿ/ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಿತ್ತು.
READ :ಭದ್ರಾವತಿ ಕಾರೇಹಳ್ಳಿಯಲ್ಲಿ ದೈತ್ಯ ಚಿರತೆ ಸೆರೆ! ನಾಯಿಯು ಸೇಫ್! ಹೇಗಿದೆ ನೋಡಿ
ಇದರ ಫಲಿತಾಂಶ ಪ್ರಕಟವಾಗಿದ್ದು, ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಶಿವಮೊಗ್ಗದ ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಕು|| ಧನುಶ್ರೀ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ವಾರ್ತಾಇಲಾಖೆ ತಿಳಿಸಿದೆ
ಗಾಂಧೀಜಿಯವರ ಸಾಮಾಜಿಕ, ಆರ್ಥಿಕ, ಸ್ವರಾಜ್ ಚಿಂತನೆಗಳು, ಸತ್ಯ, ಅಹಿಂಸೆ ತತ್ವಗಳು, ಜಾತ್ಯಾತೀತ ನಿಲುವುಗಳು, ಸೌಹಾರ್ದತೆ, ಸ್ವಾವಲಂಬನೆಯ ಬದುಕು, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮತ್ತಿತರ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು. ಧನುಶ್ರೀಯವರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.
