Dharmasthala : ಸೌಜನ್ಯಾ ಪ್ರಕರಣ ಹೊಸ ಎಸ್‌ಐಟಿ ವ್ಯಾಪ್ತಿಗೆ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಆದರೆ, ಈ ಹೊಸ ಎಸ್‌ಐಟಿ ತಂಡದಲ್ಲಿ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಮತ್ತು ಪೊಲೀಸ್ ಮಹಾನಿರ್ದೇಶಕರು ಎಸ್‌ಐಟಿ ರಚಿಸಲು ನಿರ್ಧರಿಸಿದ್ದೇವೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿದಿಲ್ಲ. ಈ ಹಿಂದೆಯೂ ನಾವು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಹೇಳಿದ್ದೆವು, ಅದರಂತೆ ಎಸ್‌ಐಟಿ ರಚಿಸಲಾಗಿದೆ” ಎಂದು ಹೇಳಿದರು.ಆದರೆ, ಈ ತನಿಖಾ ತಂಡಕ್ಕೆ ಸೌಜನ್ಯಾ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಲು ಸೂಚಿಸಿಲ್ಲ ಎಂದು ಅವರು ಖಚಿತಪಡಿಸಿದರು.
