Dharmasthala news : ಧರ್ಮಸ್ಥಳ ಪ್ರಕರಣ : ಕೆಎಸ್​ ಈಶ್ವರಪ್ಪ ಹೇಳಿದ್ದೇನು

Dharmasthala news : ಧರ್ಮಸ್ಥಳ ಪ್ರಕರಣ : ಕೆಎಸ್​ ಈಶ್ವರಪ್ಪ ಹೇಳಿದ್ದೇನು

ಶಿವಮೊಗ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ (ವಿಶೇಷ ತನಿಖಾ ದಳ) ತಂಡ ರಚನೆ ಮಾಡಿರುವ ನಿರ್ಧಾರಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಂದು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದಕ್ಕೆ ದೇವಾಲಯ ಸಮಿತಿ ಸ್ವಾಗತಿಸಿದೆ. ಹಾಗೆಯೇ ನಾನೂ ಕೂಡ ಎಸ್‌ಐಟಿ ತನಿಖೆಯನ್ನು ಸ್ವಾಗತಿಸುತ್ತೇನೆ ಎಂದರು. ಅಲ್ಲಿ ತಪ್ಪು ನಡೆದಿದ್ದರೆ, ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಈ ಕುರಿತು ಸುಳ್ಳು ಹಬ್ಬಿಸಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಿ ಎಂದು ಈಶ್ವರಪ್ಪ ಹೇಳಿದ್ದಾರೆ.

Dharmasthala news ಕೆ ಎಸ್​ ಈಶ್ವರಪ್ಪ
Dharmasthala news ಕೆ ಎಸ್​ ಈಶ್ವರಪ್ಪ

 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು