SHIVAMOGGA NEWS / ONLINE / Malenadu today/ Nov 24, 2023 NEWS KANNADA
Shivamogga | Malnenadutoday.com ಶಿವಮೊಗ್ಗದಲ್ಲಿ ವಿಶೇಷವಾಗಿ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯುತ್ತಿದೆ. ಧೀರ ದೀವರ ಬಳಗದಿಂದ ಇದೇ ನವೆಂಬರ್ ನವೆಂಬರ್ 26 ರಂದು ಈಡಿಗ ಭವನದಲ್ಲಿ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಹ ಸಂಚಾಲಕನ ಸುರೇಶ್. ಕೆ.ಬಾಳೆಗುಂಡಿ ತಿಳಿಸಿದ್ದಾರೆ.
ನಿನ್ನೆ ಈ ಸಂಬಂಧ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 26 ರಂದು ಬೆಳಗ್ಗೆ 10ಕ್ಕೆ ಸಾರಗನಜೆಡ್ಡು ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ ಅವಧೂತ ಹಾಗೂ ನಿಟ್ಟೂರು ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ರು.
ಇದೇ ವೇಳೆ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ ಅತಿಥಿಗಳಾಗಿ ಆಗಮಿಸಲಿದ್ದಾರೆ. ದೀವರ ಸಾಂಸ್ಕೃತಿಕ ವೈಭವದ ಸಂಚಾಲಕ ನಾಗರಾಜ್ ನೇರಿಗೆ ಉಪಸ್ಥಿತರಿರಲಿದ್ದಾರೆ ಎಂದರು.ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭವಿರಲಿದೆ.
ಹಸೆ ಚಿತ್ತಾರ ಕಲಾವಿದ ಸಿರಿವಂತೆ ಚಂದ್ರಶೇಖರ್ ಸಮಾರೋಪ ನುಡಿ ಆಡಲಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಧೀರ ದೀವರು ಹಾಗೂ ರಾಜ್ಯಮಟ್ಟದ ಚಿತ್ತಾರಗಿತ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣ ಟಿ ನಾಯ್ಕ್, ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು ಆಗಮಿಸಲಿದ್ದಾರೆ ಎಂದರು.
ಸಿಗಂದೂರು ಧರ್ಮದರ್ಶಿಗೆ ಪ್ರಶಸ್ತಿ
ಈ ಬಾರಿ ಧೀರ ದೀವರು ಪ್ರಶಸ್ತಿಯನ್ನು ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ಡಾ.ಎಸ್.ರಾಮಪ್ಪ, ಹಿರಿಯ ಹಸೆ ಚಿತ್ತಾರ ಕಲಾವಿದೆ ಲಕ್ಷ್ಮಮ್ಮ ಗಡೇಮನೆ, ಅಂತರಾಷ್ಟ್ರೀಯ ಜಾನಪದ ಡೊಳ್ಳು ಕಲಾವಿದ ಬಿ.ಟಾಕಪ್ಪ ಕಣ್ಣೂರು ಅವರಿಗೆ ಪ್ರದಾನ ಮಾಡಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಪುನೀತ್ ಹೆಬ್ಬೂರು, ಕೃಷ್ಣಮೂರ್ತಿ, ಕಲಗೋಡು ಕಾಮಕೃಷ್ಣ, ಜಯದೇವಪ್ಪ, ಲಕ್ಷ್ಮಿಕಾಂತ್ ಚಿಮಣೂರು ಇದ್ದರು.
