dinesh gundu rao ಸಚಿವರು ದಿನೇಶ್ ಗುಂಡೂರಾವ್ ಮತ್ತು ಮಧು ಬಂಗಾರಪ್ಪ ಇಂದು ಶಿವಮೊಗ್ಗಕ್ಕೆ
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು (ಮೇ 28) ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಚಿವ ಮಧು ಬಂಗಾರಪ್ಪ ಬೆಳಿಗ್ಗೆ 9 ಗಂಟೆಗೆ ಗೋಪಾಳದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸ್ಮಾರಕ ಗ್ರಂಥಾಲಯವನ್ನು ಉದ್ಘಾಟಿಸಿ, ಸ್ಮರಣಾ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.

dinesh gundu rao
ನಂತರ 10:30 ಗಂಟೆಗೆ ಶಿವಮೊಗ್ಗ ನಗರದ ಎಪಿಎಂಸಿಯಲ್ಲಿ ವಾಣಿಜ್ಯ ಕಟ್ಟಡದ ಉದ್ಘಾಟನೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವರಿಗೆ ಇನ್ನೊಬ್ಬ ಸಚಿವ ದಿನೇಶ್ ಗುಂಡೂರಾವ್ ಸಾಥ್ ನೀಡಲಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಮಧ್ಯಾಹ್ನ 2:30 ಗಂಟೆಗೆ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮುಂಚೆ, ಮಧ್ಯಾಹ್ನ 1:30 ಗಂಟೆಗೆ ಮಂಡಗದ್ದೆಯಲ್ಲಿ ನಿರ್ಮಿಸಲಾಗಿರುವ ವಿದ್ಯುತ್ ವಿತರಣಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
