ಶಿವಮೊಗ್ಗದಲ್ಲಿ ಜೂನ್ 30ಕ್ಕೆ ನೇರ ಉದ್ಯೋಗ ಸಂದರ್ಶನ

ಹಂಚಿಕೊಳ್ಳಿ
WhatsApp Facebook X Telegram
Shivamogga Job ಸಾಂದರ್ಭಿಕ ಚಿತ್ರ
Shivamogga Jobಸಾಂದರ್ಭಿಕ ಚಿತ್ರ

Direct Job Interview in Shivamogga / ಮಲೆನಾಡು ಟುಡೆ ಶಿವಮೊಗ್ಗ / ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂನ್ 30ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿ-ಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಸ್ವಮಾನ್ ಫೈನಾನ್ಸ್ ಪ್ರೈ.ಲಿ., ಐಲ್ಲೂ ಮ್ಯಾನ್‌ ಪವ‌ರ್ ಸೆಕ್ಯೂರ್ ಸಲ್ಯೂಷನ್ಸ್ ಎಲ್‌ಎಲ್‌ಪಿ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಉದ್ಯೋಗವಕಾಶ

ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಪದವಿ ಪೂರೈಸಿದ, 18ರಿಂದ 40 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೊನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 93806636068 ಸಂಪರ್ಕಿಸಬಹುದು ಎಂದು ವಾರ್ತಾ ಇಲಾಖೆಯ ಮೂಲಕ ಅಧಿಕೃತವಾಗಿ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor