ಶಿವಮೊಗ್ಗ : ಉದ್ಯೋಗ ಹುಡುಕ್ತಿದ್ದೀರಾ ಪಿಯುಸಿ ಆದ ಯಾವುದೇ ಅಭ್ಯರ್ಥಿಗಳಿಗೆ ಇಲ್ಲಿದೆ ನೋಡಿ ನೇರ ಸಂದರ್ಶನ

ಹಂಚಿಕೊಳ್ಳಿ
WhatsApp Facebook X Telegram
Shivamogga Job ಸಾಂದರ್ಭಿಕ ಚಿತ್ರ
Shivamogga Jobಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 05 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ನೆಕ್ಸ್ ಚರ್  ಮತ್ತು ಮುತ್ತೂಟ್ ಮನಿ ಪ್ರೈ.ಲಿ., ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

ದಿನಾಂಕ: 05-11-2026 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದ್ದು, ಪಿ.ಯು.ಸಿ. ಹಾಗೂ ಯಾವುದೇ ಪದವಿ ಪಡೆದ 18 ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor