ಶಿವಮೊಗ್ಗ : ಚಿತ್ರೀಕರಣದ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಾವು

prathapa thirthahalli
Prathapa thirthahalli - content producer

ಶಿವಮೊಗ್ಗ: ಪಾತ್ರದಾರಿ ಎಂಬ ಕನ್ನಡ ಚಲನಚಿತ್ರದ ನಿರ್ದೇಶಕರಾದ ಸಂಗೀತ್ ಸಾಗರ್ ಅವರು ಚಿತ್ರೀಕರಣದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ  ಕೊನೆಯುಸಿರೆಳೆದಿದ್ದಾರೆ.

Director Sangeeth Sagar Dies of Heart Attack
Director Sangeeth Sagar Dies of Heart Attack

ಸಂಬಂಧಿ ಮೇಲೆ ಹಗೆತನ, 7 ವರ್ಷ ಕಠಿಣ ಶಿಕ್ಷೆ , ಕಲ್ಲಗಂಗೂರು ಕೇಸ್​ನಲ್ಲಿ ಶಿವಮೊಗ್ಗ ಕೋರ್ಟ್​ನ ತೀರ್ಪು!

ಕಳೆದ ಎರಡು ತಿಂಗಳಿಂದ ಸಂಗೀತ್ ಸಾಗರ್ ಅವರ ತಂಡವು ತೀರ್ಥಹಳ್ಳಿ ಮತ್ತು ಕೊಪ್ಪ ತಾಲೂಕಿನ ವಿವಿಧ ಸ್ಥಳಗಳಲ್ಲಿ ಪಾತ್ರದಾರಿ ಚಿತ್ರದ ಚಿತ್ರೀಕರಣವನ್ನು ನಡೆಸುತ್ತಿತ್ತು. ಇಂದು (ಗುರುವಾರ) ಬೆಳಗ್ಗೆ ಸಿನಿಮಾದ ಕೊನೆಯ ಶಾಟ್‌ ಚಿತ್ರೀಕರಣಕ್ಕೆ ಯೋಜನೆ ರೂಪಿಸಲಾಗಿತ್ತು. ಬುಧವಾರ ಮಧ್ಯಾಹ್ನದ ಸಮಯದಲ್ಲಿ ಹಾಸ್ಯ ಕಲಾವಿದ ಸಂಜು ಬಸಯ್ಯ ಅವರಿಗೆ ಆ್ಯಕ್ಷನ್ ಹೇಳಿದ ಕೂಡಲೇ, ಸಂಗೀತ್ ಸಾಗರ್ ಅವರು ಸುಸ್ತಾಗಿ ಕುಸಿದು ಬಿದ್ದಿದ್ದಾರೆ.ತಕ್ಷಣವೇ ಚಿತ್ರತಂಡದ ಸದಸ್ಯರು  ಅವರನ್ನು ಕೊಪ್ಪ ತಾಲೂಕಿನ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ನಿರ್ದೇಶಕರು ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.

ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರದವರಾದ ಸಂಗೀತ್ ಸಾಗರ್ ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. 

Director Sangeeth Sagar Dies of Heart Attack

Director Sangeeth Sagar Dies of Heart Attack
Director Sangeeth Sagar Dies of Heart Attack
Share This Article