ಶಿವಮೊಗ್ಗದಲ್ಲಿ ನಿರ್ದಿಷ್ಟ ಬಗೆಯ ಗಣಪತಿಗಳ ಮಾರಾಟಕ್ಕೆ / ವಿಸರ್ಜನೆಗೆ ನಿಷೇಧ! ಜಿಲ್ಲಾಡಳಿತದ ಮಹತ್ವದ ಪ್ರಕಟಣೆ! ಯಾವೆಲ್ಲಾ ಗಣಪತಿ ವಿಗ್ರಹಗಳಿಗೆ ಇದೆ ಅವಕಾಶ!

Disposing of idols made of plaster of paris and painted in water sources is prohibited.ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದಂತಹ, ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ

ಶಿವಮೊಗ್ಗದಲ್ಲಿ ನಿರ್ದಿಷ್ಟ ಬಗೆಯ ಗಣಪತಿಗಳ ಮಾರಾಟಕ್ಕೆ / ವಿಸರ್ಜನೆಗೆ ನಿಷೇಧ! ಜಿಲ್ಲಾಡಳಿತದ ಮಹತ್ವದ ಪ್ರಕಟಣೆ!  ಯಾವೆಲ್ಲಾ ಗಣಪತಿ ವಿಗ್ರಹಗಳಿಗೆ ಇದೆ ಅವಕಾಶ!

KARNATAKA NEWS/ ONLINE / Malenadu today/ Sep 9, 2023 SHIVAMOGGA NEWS  

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶನ ಹಬ್ಬಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮಹತ್ವದ ಆದೇಶವೊಂದನ್ನ ಪ್ರಕಟಿಸಿದೆ.  ಶಿವಮೊಗ್ಗ ಜಿಲ್ಲೆಯಲ್ಲಿ ಜಲಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರಂತ ಕೆರೆಗಳಲ್ಲಿ ಇತರೇ ಜಲ ಮೂಲಗಳಲ್ಲಿ ವಿಗ್ರಹಗಳ ವಿಸರ್ಜನೆಯಿಂದಾಗುವ ಮಾಲಿನ್ಯವನ್ನು ನಿಯಂತ್ರಿಸುವ ಕುರಿತು ಈ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಕಟಣೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್​ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ಜಲಮೂಲಗಳಲ್ಲಿ ವಿಸರ್ಜನೆಗೆ ನಿರ್ಬಂಧ ಹೇರಲಾಗಿದ್ದು, ಅವುಗಳ ಮಾರಾಟ ಸಂಬಂಧ ನಿಷೇಧ ಹೇರಲಾಗಿದೆ. 

ಏನಿದೆ ಪ್ರಕಟಣೆಯಲ್ಲಿ?

ವಿಷಯ: ಶಿವಮೊಗ್ಗ ಜಿಲ್ಲೆಯಲ್ಲಿ ಜಲಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರಂತೆ ಕೆರೆಗಳಲ್ಲಿ ಇತರೇ ಜಲ ಮೂಲಗಳಲ್ಲಿ ವಿಗ್ರಹಗಳ ವಿಸರ್ಜನೆಯಿಂದಾಗುವ ಮಾಲಿನ್ಯವನ್ನು ನಿಯಂತ್ರಿಸುವ ಕುರಿತು.


ಉಲ್ಲೇಖ:. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ಸಂಖ್ಯೆ:ಮಾನಿಮಂ/18 ಜಾರಿ ಕೋಶ/ಹಿ.ಪ.ಅ//ರಿ/ 2016-17/2211 08:20.07.2016.

2. sterf ovey seabeat forstert W.P. No:927 to 931 of 2017 and 1322 of 2017 ester Bio: 31.01.2017.

3. ಪರಿಸರ ಅಧಿಕಾರಿಗಳು ಕ.ರಾ.ಮಾ.ನಿ.ಮಂ ಶಿವಮೊಗ್ಗ ಇವರ ಪತ್ರ ಸಂಖ್ಯೆ:2023-24/448 ದಿನಾಂಕ:29.08.2023,

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಅ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದಂತಹ, ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಿ ಉಲ್ಲೇಖ(1)ರಲ್ಲಿ ಅಧಿಸೂಚನೆ ಹೊರಡಿಸಿರುತ್ತದೆ. 

ಮಾನ್ಯ ಉಚ್ಛ ನ್ಯಾಯಲಯವು W.P. No:927 to 931 of 2017 and 1322 of 2017 ದಿನಾಂಕ: 31.01.2017 ರಲ್ಲಿ ನೀಡಿರುವ ಆದೇಶದಲ್ಲಿ ಮಂಡಳಿಯು ಹೊರಡಿಸಿರುವ ಅಧಿಸೂಚನೆಯನ್ನು ಕ್ರಮಬದ್ಧಗೊಳಿಸಿದೆ ಹಾಗೂ ಅಂತಹ ಉಲ್ಲಂಘನೆ ಮಾಡುವವರಿಗೆ IPC 1860 ರ ಪ್ರಕಾರ ಕ್ರಮ ಕೈಗೊಳ್ಳಬಹುದಾಗಿರುತ್ತದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿರುವ ಗಣಪತಿ ವಿಗ್ರಹಗಳ ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಮಳಿಗೆಗಳನ್ನು ಪರಿವೀಕ್ಷಿಸಿದಾಗ ನಿಷೇಧಿತ ಪದಾರ್ಥ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ವಿಗ್ರಹಗಳನ್ನು ತಯಾರಿಸುತ್ತಿರುವುದು, ಅವುಗಳನ್ನು ಹಾಗೂ ಬಣ್ಣಲೇಪಿತವಾದ ವಿಗ್ರಹಗಳನ್ನು ಮಾರಟಕ್ಕೆ ಇಟ್ಟಿರುವುದನ್ನು ಗಮನಿಸಿರುತ್ತಾರೆ. ಹಾಗೂ ಸದರಿ ವಿಷಯದ ಬಗ್ಗೆ ಉಲ್ಲೇಖ(3)ರಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟ್ ಆಫ್ ಪ್ಯಾರಿಸ್ ಉಪಯೋಗಿಸಿ ತಯಾರಿಸುತ್ತತಿರುವ ವಿಗ್ರಹಗಳು, ಬಣ್ಣಲೇಪಿತವಾದ ವಿಗ್ರಹಗಳು ಈಗಾಗಲೇ ತಯಾರಿಸಿ ಅಥವಾ ಇತರೆ ರಾಜ್ಯಗಳಿಂದ ಆಮದು ಮಾಡಿಕೊಂಡು ಮಾರಾಟಕ್ಕೆ ಇಟ್ಟಿರುವ ನಿಷೇಧಿತ ವಿಗ್ರಹಗಳನ್ನು ವಶಕ್ಕೆ ತೆಗೆದುಕೊಂಡು ಅವುಗಳನ್ನು ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಿ,ಶೆಡರ್‌ಗಳನ್ನು ಉಪಯೋಗಿಸಿ Land fill site ನಲ್ಲಿ ವಿಲೇವಾರಿ ಮಾಡಬೇಕೆಂದು ಪೌರಾಯುಕ್ತರು/ಮುಖ್ಯಾಧಿಕಾರಿಗಳು, ನಗರಸಭೆ, ಪುರಸಭೆ ಪಟ್ಟಣ ಪಂಚಾಯತ ಇವರಿಗೆ ಪತ್ರದ ಮೂಲಕ ತಿಳಿಸಿರುತ್ತಾರೆ.

ಕಾರಣ ಉಲ್ಲೇಖ(1)ರ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಜಿಲ್ಲೆಯಲ್ಲಿ ಪ್ಲಾಸ್ಟ್ ಆಫ್ ಪ್ಯಾರಿಸ್ ಮತ್ತು ಬಣ್ಣಲೇಪಿತವಾದ ವಿಗ್ರಹಗಳನ್ನು ತಯಾರಿಸುವ ಹಾಗೂ ಮಾರಾಟ ಮಾಡುವುದನ್ನು ತಡೆಯಲು ಹಾಗೂ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ತಯಾರಿ/ಮಾರಾಟ ಮಾಡುವ ವ್ಯಕ್ತಿ/ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಈ ಮೂಲಕ ಆದೇಶಿಸಲಾಗಿದೆ. ಈ ಅಧಿಸೂಚನೆಯಂತೆ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ ಶಿವಮೊಗ್ಗ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.


   

ಇನ್ನಷ್ಟು ಸುದ್ದಿಗಳು