ಗಣೇಶೋತ್ಸವ ಹಾಗೂ ಈದ್ ಮಿಲಾದ್​ ! ಹೊರಬಿತ್ತು ! ನಿಷೇಧ ಮತ್ತು ನಿಬಂಧನೆಯ ಮೂರು ಆದೇಶ ಜಾರಿ ಮಾಡಿದ ಜಿಲ್ಲಾಡಳಿತ ! ಏನದು?

The district administration has issued three orders regarding Ganeshotsav and Eid Milad in Shimogaಶಿವಮೊಗ್ಗದಲ್ಲಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಸಂಬಂಧ ಜಿಲ್ಲಾಡಳಿತ ಮೂರು ಆದೇಶಗಳನ್ನು ಹೊರಡಿಸಿದೆ

ಗಣೇಶೋತ್ಸವ ಹಾಗೂ ಈದ್ ಮಿಲಾದ್​ ! ಹೊರಬಿತ್ತು ! ನಿಷೇಧ ಮತ್ತು ನಿಬಂಧನೆಯ ಮೂರು ಆದೇಶ ಜಾರಿ ಮಾಡಿದ ಜಿಲ್ಲಾಡಳಿತ ! ಏನದು?

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS  

ಗಣೇಶ ವಿಸರ್ಜನೆ ಮತ್ತು ಈದ್‍ಮಿಲಾದ್ ಆಚರಣೆ ವೇಳೆ ಡಿ.ಜೆ.ಸಿಸ್ಟಂ ಬಳಕೆ ನಿಷೇಧ

ಸೆ.18 ರಂದು ಗಣೇಶ ಚತುರ್ಥಿ ಹಬ್ಬದ ಆಚರಣೆ ಪ್ರಯುಕ್ತ ವಿವಿಧ ದಿನಾಂಕಗಳಂದು ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. 18ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಹಾಗೂ ಸೆ. 28 ರಿಂದ ಸೆ. 30 ರವರೆಗೆ ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಆದೇಶಿಸಿದ್ದಾರೆ.



ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆಗೆ ನಿಬಂಧನೆ

ದಿನಾಂಕ: 18-09-2023 ರಂದು ಗಣೇಶ ಹಬ್ಬ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ ನಂತರ ವಿವಿಧ ದಿನಾಂಕಗಳಂದು ಹೊಳೆ ನದಿ/ಕೆರೆಗಳು/ಹಿನ್ನೀರು ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ತೆಪ್ಪ ಬಳಕೆ ಮಾಡಿದಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪ ಬಳಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವಕಾಶ ನೀಡಿ ಆದೇಶಿಸಿದ್ದಾರೆ.

ತೆಪ್ಪದ ಮೂಲಕ ಗಣೇಶ ವಿಸರ್ಜನೆ ಮಾಡುವ ವೇಳೆ ಸಂಭವಿಸಬಹುದಾದ ದುರ್ಘಟನೆಗಳನ್ನು ತಪ್ಪಿಸಲು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.ಹಾಗೂ ಕಡ್ಡಾಯವಾಗಿ ಲೈಫ್-ಜಾಕೆಟ್, ನುರಿತ ಈಜುಗಾರರು ಇದ್ದು ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.



ಬೈಕ್ ರ್ಯಾಲಿ ನಿಷೇಧ

ದಿನಾಂಕ: 18-09-2023 ರಿಂದ ಗಣೇಶ ಹಬ್ಬ ಮತ್ತು ದಿನಾಂಕ: 28-09-2023 ರಿಂದ 30-09-2023 ರವರೆಗೆ ಈದ್ ಮಿಲಾದ್ ಹಬ್ಬಗಳ ಆಚರಣೆಗಳಿದ್ದು, ಜಿಲ್ಲೆಯು ಸೂಕ್ಷ್ಮತೆಯಿಂದ ಕೂಡಿರುವ ಪ್ರದೇಶವಾಗಿರುವುದರಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ, ಸೌಹಾರ್ಧತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ದಿ: 17-09-2023 ರಿಮದ 01-10-2023 ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿರುತ್ತಾರೆ.




ಇನ್ನಷ್ಟು ಸುದ್ದಿಗಳು