ಪಾಲಿಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ! ಪ್ರಕಟಣೆಯ ಪೂರ್ತಿ ವಿವರ ಇಲ್ಲಿದೆ

The District Scheduled Tribes Welfare Department has invited applications for subsidy for construction of polyhouses for Scheduled Tribes in Shivamogga district.

ಪಾಲಿಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ! ಪ್ರಕಟಣೆಯ ಪೂರ್ತಿ ವಿವರ ಇಲ್ಲಿದೆ

KARNATAKA NEWS / ONLINE / Malenadu today/ Nov 18, 2023 SHIVAMOGGA NEWS

Shivamogga | Malnenadutoday.com |  ಪಾಲಿಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ  ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ಪ.ಪಂ.ದವರಿಗೆ ಪಾಲಿಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. 

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ  ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.02 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳನ್ನು ಸಂಪರ್ಕಿಸುವುದು. READ :ಚಿಕ್ಕಮಗಳೂರು ಆನೆ ಸಕ್ರೆಬೈಲ್ ಆನೆ ಬಿಡಾರಕ್ಕೆ ಬಂದಾಗ ನಡೀತು ಮನಕಲಕುವ ಈ ಘಟನೆ!

ಸಾಗರ; ಮೆಸ್ಕಾಂ ಜನ ಸಂಪರ್ಕ ಸಭೆ

ಮೆಸ್ಕಾಂ ಸಾಗರ ನಗರ ಉಪವಿಭಾಗ ಕಛೇರಿಯಲ್ಲಿ ನ. 21 ರಂದು  ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:9448289516.