ದಿತ್ವಾ ಚಂಡಮಾರುತ! ನಾಳೆಯಿಂದ ಕರಾವಳಿ, ಮಲೆನಾಡಿನಲ್ಲೂ ಮಳೆ! ಕೊಯಿಲು, ಕಟಾವು ಎಚ್ಚರಿಕೆ!

ajjimane ganesh

ಡಿಸೆಂಬರ್,02, 2025 : ಮಲೆನಾಡು ಟುಡೆ ಸುದ್ದಿ :  ದಿತ್ವಾ ಸೈಕ್ಲೋನ್ (ditwah cyclone update )ಎಫೆಕ್ಟ್​ನಿಂದಾಗಿ ರಾಜ್ಯದಲ್ಲಿಯು ಹವಾಮಾನದಲ್ಲಿ ಅಲ್ಪಸ್ವಲ್ಪ ಬದಲಾವಣೆ ಆಗಿದೆ. ಇದಕ್ಕೆ ಪೂರಕ ಎಂಬಂತೆ ಹವಾಮಾನ ಇಲಾಖೆ ಬೆಂಗಳೂರುರವರ ಮಾಹಿತಿ ಪ್ರಕಾರ,  ರಾಜ್ಯದಲ್ಲಿ ಇಂದು 5 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದ್ದು, ನಾಳೆಯು ಹಲವು ಕಡೆಗಳಲ್ಲಿ ಮಳೆಯಾಗುವ ಸೂಚನೆ ಇದೆಯಂತೆ.

ditwah cyclone update
ditwah cyclone update

ನಿಮ್ಮ ಗಮನದಲ್ಲಿ ಇರಲಿ! ಇವತ್ತು ಇಲ್ಲೆಲ್ಲಾ ಕರೆಂಟ್ ಇರಲ್ಲ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ದಿತ್ವಾ ಚಂಡಮಾರುತದ (Ditwah)ditwah cyclone update ಪ್ರಭಾವದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.  ನಿನ್ನೆ ದಿನ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಮಳೆಯಾಗಿದ್ದರೆ, ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನದ ಸ್ಥಿತಿ ಬದಲಾಗಲಿದೆ. 

ಇಂದು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಜಿಲ್ಲೆಗಳಾದ್ಯಂತ ಒಣ ಹವಾಮಾನವು ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ditwah cyclone update
ditwah cyclone update

ditwah cyclone update ಡಿಸೆಂಬರ್‌ 3 ಮತ್ತು 4 ರ ಮುನ್ಸೂಚನೆ

ಡಿಸೆಂಬರ್‌ 3 ರಂದು ಅಂದರೆ ನಾಳೆದಿನ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಲ್ಲಿ ಅಡಿಕೆ ದರ ಏರಿಳಿತ: ಶಿವಮೊಗ್ಗ, ಸಾಗರ ಸೇರಿದಂತೆ ಹಲವು APMC ಅಡಕೆ ರೇಟ್‌ಗಳು ಇಲ್ಲಿವೆ

ಡಿಸೆಂಬರ್‌ 4 ರಂದು ಸಹ ದಕ್ಷಿಣ ಕನ್ನಡ, ಉಡುಪಿ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್​ ಬಂತು! ಕಳೆದ ವರ್ಷಕ್ಕೆ ಹೋಲಿಸಿದರೆ ತುಂಗಾ, ಭದ್ರಾ, ಲಿಂಗನಮಕ್ಕಿಯಲ್ಲಿ ಎಷ್ಟಿದೆ ನೀರು!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ditwah cyclone update ಹವಾಮಾನ ಮುನ್ಸೂಚನೆ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ  ಮಳೆ  Karnataka Weather Forecast Rain in 5 Districts Including Mysuru, Mandya, shivamogga, chikkamagaluru

Share This Article