ನಾಳೆಯಿಂದ ಈ ಎರಡು ವಿಷಯಕ್ಕೆ ಶಿವಮೊಗ್ಗದಲ್ಲಿ ನಿಷೇಧ | ಡಿಸಿ ಗುರುದತ್ತ ಹೆಗೆಡೆ ಆದೇಶ
dj and bike rally ban in Shivamogga, ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ಹಾಗೂ ಡಿಜೆಗೆ ನಿಷೇಧ ಹೇರಲಾಗಿದೆ
SHIVAMOGGA | MALENADUTODAY NEWS | Sep 3, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆಯಲ್ಲಿ ಹಬ್ಬಕ್ಕೆ ತಯಾರಿ ನಡೆಯುತ್ತಿದೆ ಸರ್ಕಾರಿ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಗಣೇಶೋತ್ಸವ 2024 ರ ಆಚರಣೆಗೆ ಸಕಲ ಸಿದ್ದತೆಗಳನ್ನ ನೋಡಿಕೊಳ್ತಿದೆ. ಈ ನಡುವೆ ಜಿಲ್ಲಾಡಳಿತ ಕೆಲವೊಂದು ವಿಚಾರಗಳಲ್ಲಿ ನಿರ್ಬಂಧ ಹೇರಿದೆ. ಅದರ ವಿವರ ಹೀಗಿದೆ.
ಗಣೇಶ ವಿಸರ್ಜನೆಗೆ ತೆಪ್ಪ ಬಳಕೆಗೆ ನಿಯಮ
ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 7 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಆನಂತರ ಅದೇ ದಿನ ಅಥವಾ ನಂತರದ ದಿನಗಳಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಈ ವೇಳೆ ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡುವ ಸಮಯದಲ್ಲಿ ಕೆಲವು ನಿಯಮಗಳನ್ನ ಪಾಲಿಸುವಂತೆ ತಿಳಿಸಲಾಗಿದೆ.
ತೆಪ್ಪದಲ್ಲಿ ಕೇವಲ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ ಕಲ್ಪಿಸಬೇಕು. ತೆಪ್ಪದಲ್ಲಿ ಇರುವುವರು ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಳ್ಳಬೇಕು. ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದ್ದಾರೆ.
ಡಿಜೆ ನಿಷೇಧ
ಇನ್ನೂ ಇದೇ ಗಣೇಶೋತ್ಸವದ ಹಿನ್ನೆಲೆಯಲ್ಲಿ ಡಿಜೆ ಬಳಸುವುದನ್ನ ಬ್ಯಾನ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 7 ರಿಂದ ಗಣೇಶೋತ್ಸವ ಪೂರ್ಣಗೊಳ್ಳುವವರೆಗೆ ಹಾಗೂ ಸೆ. 16 ರಿಂದ ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವವರೆಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ.ಸಿಸ್ಟಂ ಬಳಕೆಯನ್ನು ನಿಷೇದಿಸಲಾಗಿದೆ.
ಬೈಕ್ ರ್ಯಾಲಿ ಬ್ಯಾನ್
ಇನ್ನೂ ಇದೇ ಸೆ.6 ರಿಂದ ಸೆ. 20ರ ವರೆಗೆ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಡೆಸುವುದನ್ನ ಸಹ ನಿರ್ಬಂಧಿಸಲಾಗಿದೆ
ಜೂನ್, ಜುಲೈ, ಆಗಸ್ಟ್ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್ ನ್ಯೂಸ್ ಇಲ್ಲಿದೆ
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?