MALENADUTODAY.COM | SHIVAMOGGA NEWS | POLITICAL |
ರಾಜ್ಯ ಕಾಂಗ್ರೆಸ್ ಆರಂಭಿಸಿರುವ ಪ್ರಜಾಧ್ವನಿ ಬಸ್ ಯಾತ್ರೆ ಇದೀಗ ಶಿವಮೊಗ್ಗಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ವಿಚಾರಕ್ಕೆ ಪ್ರತಿಕ್ರಿಯಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರು, ವ್ಯಾಪಾರ ವರ್ಗದವರನ್ನು ನೆಮ್ಮದಿಯಾಗಿ ಬದುಕಲು ಬಿಡುತ್ತಿಲ್ಲ. ನಾನು ಈ ಹಿಂದೆ ಶಿವಮೊಗ್ಗಕ್ಕೆ ಬಂದಾಗ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಶಿವಮೊಗ್ಗಕ್ಕೆ ಎಷ್ಟು ಕೋಟಿ ಬಂಡವಾಳ ಹೂಡಿಕೆಯಾಗಿದೆ ಎಂದು ಕೇಳಿದ್ದೆ. ಮೈಸೂರು ಮಹಾರಾಜರು ಕೊಟ್ಟ ವಿಐಎಸ್ಎಲ್ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹೋದಾಗ, ಸಿದ್ದರಾಮಯ್ಯ ಅವರ ಸರ್ಕಾರವಿತ್ತು. ಆಗ ಸಂಗಮೇಶ್ ಅವರು ಮಾಜಿ ಶಾಸಕರಾಗಿದ್ದರೂ ಈ ಕಾರ್ಖಾನೆಗೆ ಗಣಿ ಜಾಗ ಮಂಜೂರು ಮಾಡಿಸಿದ್ದರು. ಆದರೂ ಕೇಂದ್ರ ಸರ್ಕಾರ ಈ ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಿ ಮತ್ತೆ ಆರಂಭಕ್ಕೆ ಆದ್ಯತೆ ನೀಡಲಿಲ್ಲ. ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪನವರು 1 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಭರವಸೆ ನೀಡಿದರು. ನಂತರ ಕೇಂದ್ರ ಸಚಿವರು ಬಂದು 6 ಸಾವಿರ ಕೋಟಿ ಬಂಡವಾಳ ಹೂಡಿಕೆ ನೀಡುವುದಾಗಿ ಹೇಳಿದ್ದರು. ಇದ್ಯಾವುದನ್ನು ಮಾಡಲಿಲ್ಲ. ಶಿವಮೊಗ್ಗ ಸಂಸದರೂ ಸೇರಿ ರಾಜ್ಯದಿಂದ 25 ಬಿಜೆಪಿ ಸಂಸದರಿದ್ದಾರೆ. ಆದರೂ ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿರುವ ಈ ಕಾರ್ಖಾನೆ ಉಳಿಸಲು ಪ್ರಯತ್ನಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ ಸಾರ್ವಜನಿಕ ಉದ್ದಿಮೆಗಳನ್ನು ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿದೆ. ಈಗ ಈ ಕಾರ್ಖಾನೆ ಮಾರಾಟ ಮಾಡಲು ಮುಂದಾಗಿದ್ದು, ಖರೀದಿ ಮಾಡಲು ಯಾರೂ ಬಂದಿಲ್ಲ ಎಂದು ಈಗ ಮುಚ್ಚಲು ಮುಂದಾಗಿದ್ದಾರೆ. ವಿಐಎಸ್ಎಲ್ ಕಾರ್ಖಾನೆಗೆ ಬಂಡವಾಳ ಹಾಕುತ್ತೆನೆ ಎಂದವರೆಲ್ಲಾ ಹಿಂದೆ ಸರಿದರು. ವಿಶ್ವೇಶ್ವರಯ್ಯನವರು ಸ್ಥಾಪಿಸಿದ ಕಾರ್ಖಾನೆ ಸರ್ಕಾರದ ಆಸ್ತಿಯಾಗಿದೆ. ಎಂಪಿಎಂ ಮತ್ತು ವಿಐಎಸ್ಎಲ್ ಕಾರ್ಖಾನೆಗಳು ಮುಚ್ಚಬಾರದು. ಖಾಸಗಿ ಕಾರ್ಖಾನೆಗಳು ನಡೆಯುತ್ತವೆ, ಆದರೆ, ಸರ್ಕಾರ ಯಾಕೆ ನಡೆಸಲು ಆಗಲ್ಲಎಂದು ಪ್ರಶ್ನಿಸಿದ್ರು.
ಹರ್ಷನ ಹತ್ಯೆಗೆ ಒಂದು ವರ್ಷ! ವಾರ್ಷಿಕ ಪುಣ್ಯಸ್ಮರಣೆಗೆ ಆಹ್ವಾನ!
ಈ ಕಾರ್ಖಾನೆ ಮುಚ್ಚಲು ಬಿಡುವುದಿಲ್ಲ, ಬಂಡವಾಳ ಹೂಡಿಕೆ ಮಾಡಿಸುವುದಾಗಿ ಮಾತು ಕೊಟ್ಟಮೇಲೆ ಸಂಸತ್ ಎದುರಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿಯಾದರೂ ಕಾರ್ಖಾನೆ ಪುನಶ್ಚೇತನಕ್ಕೆ ಬಂಡವಾಳ ಹೂಡಿಕೆಯಾಗುವಂತೆ ಮಾಡಬೇಕು. ಅಧಿಕಾರ ಮಾತ್ರ ಬೇಕು, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದಿಲ್ಲ ಎಂದರೆ ಹೇಗೆ? ಜನರ ನೋವು ಕೇಳಲು ನಾವು ಪ್ರಜಾಧ್ವನಿ ಯಾತ್ರೆ ಮೂಲಕ ಬಂದಿದ್ದೇವೆ. ವಿಐಎಸ್ ಎಲ್, ಎಂಪಿಎಂ ಕಾರ್ಮಿಕರ ಜತೆ ಮಾತನಾಡಿದ್ದೇನೆ. ಯಡಿಯೂರಪ್ಪ, ಈಶ್ವರಪ್ಪ, ಸಂಜೆಯಾಗುತ್ತಲೇ ಶಿವಮೊಗ್ಗದಲ್ಲಿ ಬಾಗಿಲು ಹಾಕಿಸುತ್ತಾರೆ. ಹೀಗಾದರೆ ಯಾರು ಬಂಡಾವಾಳದಾರರು ಬರ್ತಾರೆ. ಅಡಕೆ ಬಗ್ಗೆ ಆರಗ ಜ್ಞಾನೇಂದ್ರ ಸರಿಯಾದ ನಿರ್ಧಾರ ತೆಗೆದುಕೊಳ್ಳದೆ, ಕುಂಟು ನೆಪ ಹೇಳುತ್ತಿದ್ದಾರೆ. ಇವರಿಗೆ ಅಧಿಕಾರ ಮಾತ್ರ ಬೇಕು. ಜನರ ಕೂಗು, ಸಮಸ್ಯೆಗಳನ್ನು ಈ ಸರ್ಕಾರ ಆಲಿಸುತ್ತಿಲ್ಲ. ನಮಗೆ ಅಧಿಕಾರ ಬಂದರೆ, ನಾವು ಈ ಕಾರ್ಖಾನೆ ಉಳಿಸುತ್ತೆವೆ. ನಾವು 140 ಕ್ಷೇತ್ರ ಗೆದ್ದು ವಿಐಎಸ್ಎಲ್ ಉಳಿಸುತ್ತೆವೆ ಎಂದ ಡಿಕೆ ಶಿವಕುಮಾರ್, ಬಿಜೆಪಿಯವರು ಕಾರ್ಮಿಕರ ಮೂಗಿಗೆ ಅಲ್ಲ, ತಲೆ ಮೇಲೆ ತುಪ್ಪ ಹಚ್ಚುತ್ತಿದ್ದಾರೆ.
SHIVAMOGGA AIRPORT ತೋರಿಸಿ 72 ಸಾವಿರ ರೂಪಾಯಿ ಗುಳುಂ! ಕೆಲಸದ ಕರೆ ನಂಬಿದ್ದಕ್ಕೆ ಮಹಾಮೋಸ ! ಏನಿದು ಫಸ್ಟ್ ಕೇಸ್
ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸುವುದಾಗಿ ಬಿ.ಎಸ್ ಯಡಿಯೂರಪ್ಪನವರು ಶಿವಮೊಗ್ಗ ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದರು. ಆದರೆ ಅವರು ತಮ್ಮ ಮಾತನ್ನು ಉಳಿಸಿಕೊಂಡಿಲ್ಲ. ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಜಿಲ್ಲೆಯಲ್ಲಿ ಮತ ಕೇಳುವ ನೈತಿಕತೆ ಇಲ್ಲ ಎಂದರು.
ಕಟೀಲ್ರನ್ನ ಬಿಜೆಪಿಯವರೇ ಸೀರಿಯಸ್ ಆಗಿ ತೆಗೆದುಕೊಂಡಿಲ್ಲ
ಜನಧ್ವನಿ ಯಾತ್ರೆ ಬ್ರೇಕ್ ಫೇಲ್ ಆಗಿದೆ ಎಂಬ ಕಟೀಲು ಹೇಳಿಕೆ ವಿಚಾರಕ್ಕೆ ವ್ಯಂಗ್ಯವಾಡಿದ ಡಿಕೆ ಶಿವಕುಮಾರ್, ಕಟೀಲರನ್ನು ಬಿಜೆಪಿಯವರೇ ಸೀರಿಯಸ್ ಆಗಿ ತೆಗೆದುಕೊಂಡಿಲ್ಲ. ನಾವೇಕೆ ಸೀರಿಯಸ್ ಆಗಿ ತೆಗೆದುಕೊಳ್ಳಬೇಕು….!? ಅವರಿಗೆ ಕೇವಲ ಲವ್ ಜಿಹಾದ್ ಅಷ್ಟೇ ಬೇಕಾಗಿರೋದು. ನಾಯಕತ್ವ ಇಲ್ಲದ ಬಿಜೆಪಿಯವರು ಮೋದಿಯನ್ನು ಕರೆಸಿಕೊಂಡು ಓಟು ಕೇಳುತ್ತಿದ್ದಾರೆ ಎಂದು ಟೀಕಿಸಿದ್ರು.
ಟಿಕೆಟ್ ವಿಚಾರಕ್ಕೆ ಹಾಸ್ಯ ಮಾಡಿದ ಕೆಪಿಸಿಸಿ ಅಧ್ಯಕ್ಷ
ಇನ್ನೂ ಬಿಕೆ ಸಂಗಮೇಶ್ರಿಗೆ ಟಿಕೆಟ್ ನೀಡುವ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ನೋಡೋಣ ಇಲ್ಲಿನ ಜನರು ಏನಂತಾರೆ ಅಂತಾ ಬಂದಿದ್ದೆನೆ.ನಾನೆ ನಿಲ್ಲೋಣ ಅಂತಿದಿನಿ ಎಲ್ಲಿ ಎಂದು ಹಾಸ್ಯ ಮಾಡಿದರು. ಮುಂದಿನ ತಿಂಗಳಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ರು.
ಕಾರ್ಖಾನೆ ನೌಕರರ ಸಂಕಷ್ಟ ಆಲಿಸಿದ ಶಿವಕುಮಾರ್
ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ಕಾರ್ಖಾನೆ ನೌಕಕರಿಂದ ಕಾರ್ಖಾನೆಯ ಸ್ಥಿತಿಗತಿಗಳ ಬಗ್ಗೆ ಹಾಗೂ ಅವರ ಕಷ್ಟಗಳ ಬಗ್ಗೆ ಮಾಹಿತಿ ಪಡೆದರು. ಯಡಿಯೂರಪ್ಪನವರು ಕೇಂದ್ರ ಸರ್ಕಾರದಿಂದ ಕಾರ್ಖಾನೆಗೆ 1 ಸಾವಿರ ಕೋಟಿ ರು. ಬಂಡವಾಳ ಹೂಡಿಕೆ ಮಾಡಿಸುವ ಭರವಸೆ ನೀಡಿದ್ದರು. ನಂತರ ಕೇಂದ್ರ ಸಚಿವ ತೋಮರ್ ಅವರು 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಮಾತು ಕೊಟ್ಟಿದ್ದರು. ಸಿದ್ದರಾಮಯ್ಯ ಅವರ ಸರ್ಕಾರ ಈ ಕಾರ್ಖಾನೆ ಪುನರಾರಂಭಕ್ಕೆ 150 ಎಕರೆ ಗಣಿ ಭೂಮಿ ಮಂಜೂರು ಮಾಡಿದೆ. ಆದರೂ ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಬಂಡವಾಳ ಹೂಡಿಕೆ ಮಾಡಿಸದೇ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ವಿವರಿಸಿದರು. ಈ ಕಾರ್ಖಾನೆ ಮುಚ್ಚಿದರೆ ಸಾವಿರಾರು ಕುಟುಂಬಗಳು ಬೀದಿಗೆ ಬೀಳಲಿವೆ. ಹೀಗಾಗಿ ಕೂಡಲೇ ಕಾರ್ಖಾನೆ ಮುಚ್ಚುವ ಕೇಂದ್ರ ಸರ್ಕಾರದ ತೀರ್ಮಾನವನ್ನು ತಡೆ ಹಿಡಿಯಬೇಕು ಎಂದು ತಮ್ಮ ಅಳಲು ತೋಡಿಕೊಂಡರು.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com




