ಶಿವಮೊಗ್ಗದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದು, ನಾಲ್ವರ ಮೇಲೆ ಹಲ್ಲೆ ಕೇಸ್​/ ಕೋರ್ಟ್ ಶಿಕ್ಷೆಯೇನು ಗೊತ್ತಾ?

Malenadu Today

ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದ್ದು ಬರೋಬ್ಬರಿ ಮೂರು ವರ್ಷ ಶಿಕ್ಷೆ ನೀಡಿದೆ.  ದಿನಾಂಕಃ 21-01-2018  ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋವಿಂದಪುರ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ. 

ಇಲ್ಲಿನ  ನವೀನ, ನಿತಿನ್, ಗೋಪಿ, ಲೋಹಿತ್, ಪ್ರಜ್ವಲ್, ರಾಜು ರವರ ಮೇಲಿನ ಹಳೆ ದ್ವೇಷಕ್ಕೆ , ಆರೋಪಿಗಳಾದ ಶಿವಮೊಗ್ಗ ಟೌನ್ ಕೊರಮರಕೇರಿ ನಿವಾಸಿ ವಿಜಯ್ ಕುಮಾರ್, ಪ್ರವೀಣ್, ನವೀನ, ಚೇತನ ಮತ್ತು ಸಂತೋಷ್ ರವರುಗಳು ಸೇರಿಕೊಂಡು ಹಲ್ಲೆ ನಡೆಸಿದ್ದರು. 

Malenadu Today

ನವೀನ್ ಹಾಗೂ ನಿತಿನ್​ಗೆ ಚಾಕುವಿನಿಂದ ಇರಿದಿದ್ದ ಆರೋಪಿಗಳು, ಗೋಪಿ , ಲೋಹಿತ್ ಪ್ರಜ್ವಲ್​ಗೆ ಹಾಗೂ ರಾಜುಗೆ ದೊಣ್ಣೆಯಿಂದ ಹಲ್ಲೆ ಮಾಡಿದ್ರು. ಈ ಸಂಬಂದ  ನವೀನ್ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆ ಗುನ್ನೆ  ಸಂಖ್ಯೆ 0025/2018 ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲಾಗಿತ್ತು.  ಆಗಿನ ತನಿಖಾಧಿಕಾರಿಗಳಾದ  ಗಿರೀಶ್ ಬಿ.ಸಿ ಪೊಲೀಸ್ ಉಪ ನಿರೀಕ್ಷಕರು, ತುಂಗಾನಗರ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತರ ವಿರುದ್ಧ  ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ  ಸಲ್ಲಿಸಿದ್ರು. 

ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದ್ದು,  3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  1) ವಿಜಯ್ ಕುಮಾರ್, 26 ವರ್ಷ, ಕೊರಮರಕೇರಿ, ಶಿವಮೊಗ್ಗ ಟೌನ್,  2) ಪ್ರವೀಣ್, 20 ವರ್ಷ,ಕೊರಮರಕೇರಿ, ಶಿವಮೊಗ್ಗ ಟೌನ್, 3)  ನವೀನ, 24 ವರ್ಷ, ಕೊರಮರಕೇರಿ, ಶಿವಮೊಗ್ಗ ಟೌನ್,   4) ಚೇತನ, 24 ವರ್ಷ,  ಕೊರಮರಕೇರಿ, ಶಿವಮೊಗ್ಗ ಟೌನ್ ಮತ್ತು 5) ಸಂತೋಷ, 33 ವರ್ಷ, ಕೊರಮರಕೇರಿ, ಶಿವಮೊಗ್ಗ ಟೌನ್ ರವರ ವಿರುದ್ಧ  143, 144, 147, 148, 324, 307, 354(B), 109, 341, 506 ಸಹಿತ 149 ಐಪಿಸಿ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ  3 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 65,000/- ದಂಡ, ದಂಡವನ್ನು ಕಟ್ಟಲು ವಿಫಲರಾದರೆ 3 ತಿಂಗಳ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದೆ. 

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

 

MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite , Shivamogga Court, Third Additional District and Sessions Court Shivamogga, Shivamogga District Court, Shivamogga Court Complex, Shivamogga Court, Tunganagar Police Station Case, Assault with Knife and Charges ಶಿವಮೊಗ್ಗ ಕೋರ್ಟ್, ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗ, ಶಿವಮೊಗ್ಗ ಜಿಲ್ಲಾ ಕೋರ್ಟ್ , ಶಿವಮೊಗ್ಗ ಕೋರ್ಟ್ ಕಾಂಪ್ಲೆಕ್ಸ್, ಶಿವಮೊಗ್ಗ ಕೋರ್ಟ್, ತುಂಗಾನಗರ ಪೊಲೀಸ್ ಸ್ಟೇಷನ್​ ಕೇಸ್, ಚಾಕುವಿನಿಂದ ಹಲ್ಲೆ ಮತ್ತು ಆರೋಪ

Share This Article