ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ನಗರದಲ್ಲಿ ಖ್ಯಾತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಪ್ರತಿಷ್ಠಿತ ವೈದ್ಯಕೀಯ ಕುಟುಂಬವಾಗಿತ್ತು. ನಗರದ ಅಶ್ವಥ್ ನಗರ ಬಡಾವಣೆಯಲ್ಲಿ ಈ ಘಟನೆಯಲ್ಲಿ ನಡೆದಿದೆ.
ನಗರದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಮೃತರು. ವಿಷಯ ತಿಳಿದು ಸ್ಥಳಕ್ಕೆ ತೆರಳಿರುವ ವಿನೋಬನಗರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪ್ರಕರಣ ದಾಖಲಿಸಿ, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ಘಟನೆಯ ವಿವರ : ಡಾ. ಜಯಶ್ರೀ ಅವರು ತಮ್ಮ ಮನೆಯ ಕೆಳ ಅಂತಸ್ತಿನಲ್ಲಿ ಪ್ರಾಣ ಕಳೆದುಕೊಂಡಿದ್ದರೆ, ಪುತ್ರ ಆಕಾಶ್ ಮೊದಲ ಮಹಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ತಾಯಿ ಮತ್ತು ಮಗ ಇಬ್ಬರೂ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂಬ ಮಾಹಿತಿಯಿದೆ. ಅದರಲ್ಲಿ ತಮ್ಮ ಹೆಸರಿನಲ್ಲಿದ್ದ ಆಸ್ತಿಯನ್ನು ಸೊಸೆಯ ಹೆಸರಿಗೆ ಬರೆದಿಟ್ಟು ಬಳಿಕ ಈ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ದುರ್ಘಟನೆಗೆ ಕೌಟುಂಬಿಕ ಸಮಸ್ಯೆ ಕಾರಣ ಎನ್ನಲಾಗುತ್ತಿದೆ. ಇನ್ನೂ ಸುಮಾರು 1.5 ವರ್ಷಗಳ ಹಿಂದೆ ಮೃತ ಆಕಾಶ್ ಅವರ ಮೊದಲ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್ ಅವರಿಗೆ ಎರಡನೇ ಮದುವೆಯನ್ನು ಮಾಡಲಾಗಿತ್ತು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,


Shivamogga News, Doctor Suicide, Dr Jayashree, Ashwath Nagar, Vinobanagar Police Station,





ಪತ್ನಿ ವಿಚಾರದಲ್ಲಿ ಪತಿರಾಯನಿಗೆ 2 ವರ್ಷ ಶಿಕ್ಷೆ! ಸಾಗರ ಕೋರ್ಟ್ನಲ್ಲಿ ತೀರ್ಪು
