KARNATAKA NEWS/ ONLINE / Malenadu today/ Jul 24, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಪೊಲೀಸರು ಕಳ್ಳತನ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರನ್ನ ಬಂಧಿಸಿದ್ಧಾರೆ. ದಿನಾಂಕ:19-07-2023 ರಂದು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ತೆಯ ಆವರಣದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ನಡೆದಿದ್ದೇನು?
ಹೊರ ರೋಗಿಗಳ ರಶೀದಿ ನೀಡುವ ಸ್ಥಳದಲ್ಲಿ ಮಹಿಳೆಯೊಬ್ಬರು ಬಿಲ್ ಕಟ್ಟಲು ಸರದಿ ಸಾಲಿನಲ್ಲಿ ನಿಂತಿದ್ದ ಸಮಯದಲ್ಲಿ, ಅವರ ವ್ಯಾನಿಟಿ ಬ್ಯಾಗಿನಲ್ಲಿದ್ದ 32 ಗ್ರಾಂ ತೂಕದ ಬಂಗಾರದ ಆಭರಣಗಳಿದ್ದ ಬಾಕ್ಸ್ ಕಳುವಾಗಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆ (Doddpet Police Station) ನಲ್ಲಿ ಐಪಿಸಿ 379 ಅಡಿಯಲ್ಲಿ ಕೇಸ್ ದಾಖಲಾಗಿತ್ತು.
ಸದ್ಯ ಪ್ರಕರಣವನ್ನು ದೊಡ್ಡಪೇಟೆ ಪೊಲೀಸರು ಭೇದಿಸಿದ್ದಾರೆ. ದಿನಾಂಕಃ 22-07-2023 ರಂದು ಪ್ರಕರಣದ ಆರೋಪಿತಳಾದ ತಾಹಿರಾ ರೋಹಿ, 30 ವರ್ಷ ಗೌಸಿಯಾ ಸರ್ಕಲ್ ಹತ್ತಿರ, ಟಿಪ್ಪುನಗರ ಶಿವಮೊಗ್ಗ ಟೌನ್ ಈಕೆಯನ್ನು ಪೊಲೀಸರು ಬಂಧಿಸಿದ್ಧಾರೆ. ಈಕೆಯಿಂದ ಕಳುವಾಗಿದ್ದ ಅಂದಾಜು ಮೌಲ್ಯ 1,28,000/- ರೂ ಗಳ ಒಟ್ಟು 32 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಅಮಾನತ್ತುಪಡಿಸಿಕೊಂಡಿದ್ದಾರೆ.
ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್ನಲ್ಲಿ ಕೋರ್ಟ್ ತೀರ್ಪು!
ಮಾಜಿ ಸಿಎಂ ಬಿಎಸ್ವೈ ಇನ್ಮುಂದೆ ಡಾ.ಬಿಎಸ್ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR
ಮಗ ಬೈಕ್ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?
ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!