Dr Pratibha ಸಾಗರ: ಸಾಗರ ತಾಲೂಕಿನ ಬಾರಂಗಿ ಹೋಬಳಿಯ ಭಾನುಕುಳಿ ಗ್ರಾಮದಲ್ಲಿ ಅಕ್ರಮವಾಗಿ ಆಕ್ರಮಿಸಿಕೊಳ್ಳಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರ ನೇತೃತ್ವದ ಕಂದಾಯ ತಂಡ ತೆರವುಗೊಳಿಸಿದೆ. ಗ್ರಾಮದ ಸರ್ವೇ ನಂಬರ್ 44ರಲ್ಲಿ ಒತ್ತುವರಿಯಾಗಿದ್ದ 1 ಎಕರೆಗೂ ಅಧಿಕ ವಿಸ್ತೀರ್ಣದ ಸರ್ಕಾರಿ ಭೂಮಿಯನ್ನು ವಶಕ್ಕೆ ಪಡೆಯಲಾಗಿದ್ದು, ಒತ್ತುವರಿ ಪ್ರದೇಶದಲ್ಲಿದ್ದ ಬೃಹತ್ ಕಬ್ಬಿಣದ ಗೇಟ್‌ಗಳನ್ನು ಜೆಸಿಬಿ ಯಂತ್ರದ ಮೂಲಕ ಧ್ವಂಸಗೊಳಿಸಲಾಗಿದೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್‌ನ 65ನೇ ಸಂಸ್ಥಾಪನಾ ದಿನಾಚರಣೆ: ಯುವಶಕ್ತಿಗೆ ನಾಯಕರ ಕರೆ!
ಸುರಿಯುವ ಭಾರಿ ಮಳೆಯನ್ನೂ ಲೆಕ್ಕಿಸದೆ ತಹಶೀಲ್ದಾರ್ ಡಾ. ಪ್ರತಿಭಾ ಹಾಗೂ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಈ ಭರ್ಜರಿ ಕಾರ್ಯಾಚರಣೆ ನಡೆಸಿದೆ. ವಶಪಡಿಸಿಕೊಂಡ ಜಮೀನಿನ ಸುತ್ತಲೂ ಸರ್ಕಾರಿ ಜಮೀನು – ಅತಿಕ್ರಮಣ ನಿಷೇಧಿಸಿದೆ ಎಂಬ ಸೂಚನಾ ಬೋರ್ಡ್‌ಗಳನ್ನು ತಕ್ಷಣವೇ ಅಳವಡಿಸಲಾಗಿದೆ. ಯಾವುದೇ ರಾಜಕೀಯ ಅಥವಾ ಪ್ರಭಾವಿಗಳ ಒತ್ತಡಕ್ಕೂ ಮಣಿಯದೆ ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವಲ್ಲಿ ತಹಶೀಲ್ದಾರ್ ತೋರುತ್ತಿರುವ ಕರ್ತವ್ಯನಿಷ್ಠೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಈ ವೇಳೆ ಮಾತನಾಡಿದ ತಹಶೀಲ್ದಾರ್ ಡಾ. ಪ್ರತಿಭಾ ಅವರು, ಸಾಗರ ತಾಲೂಕಿನಾದ್ಯಂತ ಸರ್ಕಾರಿ ಜಮೀನು ಒತ್ತುವರಿಯಾದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನಿಯಮ ಮೀರಿ ಅತಿಕ್ರಮಣ ಮಾಡಲು ಯತ್ನಿಸಿದರೆ ಅಥವಾ ಸೂಚನೆ ಮೀರಿದರೆ ಕರ್ನಾಟಕ ಭೂಕಂದಾಯ ಕಾಯ್ದೆ 192/A ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
