ನಾಳೆ ಅ.08 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Drinking Water Supply to Be Disrupted in Shivamogga on September 6 and 7
Drinking Water Supply to Be Disrupted in Shivamogga on September 6 and 7

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಸಂಬಂಧಿಸಿದ ಹಾಲಿ ಭೂಗತ ಕೇಬಲ್ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅ.08ರಂದು ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಾರ್ತಾ ಇಲಾಖೆ ಮೂಲಕ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಭೂಗತ ಕೇಬಲ್ ದುರಸ್ತಿ ಕಾಮಗಾರಿಗಾಗಿ ಮೆಸ್ಕಾಂ ವತಿಯಿಂದ ಮಾರ್ಗ ಮುಕ್ತತೆ ಕೋರಿರುವುದರಿಂದ ಕುಡಿಯುವ ನೀರು ಸರಬರಾಜು ಮೇಲೆ ಪರಿಣಾಮ ಬೀಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾರ್ವಜನಿಕರು ಪರಿಸ್ಥಿತಿಯನ್ನು ಅರಿತು ಸಹಕರಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಶಿವಮೊಗ್ಗ ನಿರ್ವಹಣೆ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor