ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ವ್ಯತ್ಯಯ :  ಯಾವಾಗ

ಹಂಚಿಕೊಳ್ಳಿ
WhatsApp Facebook X Telegram
Shimoga City Water Water Supply Interruption Water Supply Interruption Drinking water
Shimoga City Water Water Supply Interruption Drinking water

ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕಾರಣ, ಶಿವಮೊಗ್ಗ ನಗರದಲ್ಲಿ ಸೆಪ್ಟೆಂಬರ್ 16 ಮತ್ತು 17 ರಂದು ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಮೆಸ್ಕಾಂ ಅಧಿಕಾರಿಗಳು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸಂಪರ್ಕದಲ್ಲಿ ತಾಂತ್ರಿಕ ನಿರ್ವಹಣೆ ಕಾರ್ಯ ಕೈಗೊಂಡಿದ್ದಾರೆ. ಈ ಕಾರಣದಿಂದಾಗಿ, ನಗರಕ್ಕೆ ನೀರು ಸರಬರಾಜು ಮಾಡುವ ಕಾರ್ಯಕ್ಕೆ ಅಡಚಣೆಯಾಗುತ್ತಿದೆ. ಪರಿಣಾಮವಾಗಿ, ಮುಂದಿನ ಎರಡು ದಿನಗಳ ಕಾಲ ಶಿವಮೊಗ್ಗ ನಗರದಾದ್ಯಂತ ದೈನಂದಿನ ಕುಡಿಯುವ ನೀರಿನ ಪೂರೈಕೆ ಲಭ್ಯವಿರುವುದಿಲ್ಲ ಎಂದು ಕ.ನ.ನೀ.ಸ ಮತ್ತು ಒ.ಚ. ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Drinking water

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor