200 ಮಹಿಳೆಯರಿಗೆ ಸೀರೆ, ತೆಂಗಿನ ಸಸಿ ವಿತರಣೆ, ಯಾವಾಗ, ಏನಿದು ಕಾರ್ಯಕ್ರಮ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

DSS Leader Gurumurthy ಶಿವಮೊಗ್ಗ: ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ ಅವರ 62ನೇ ವರ್ಷದ ಹುಟ್ಟುಹಬ್ಬದ ಆಗಸ್ಟ್ 12 ರಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸುಮಾರು 200 ರಿಂದ 250 ಮಹಿಳೆಯರಿಗೆ ಸೀರೆ ಹಾಗೆಯೇ ತೆಂಗಿನ ಸಸಿಗಳನ್ನು ನೀಡಲಾಗುತ್ತದೆ.

ಶಿವಮೊಗ್ಗ : ತುಂಗಾ ಜಲಾಶಯದ ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಇವತ್ತು ? 

ಈ ಕುರಿತು ಇಂದು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಎಸ್ಎಸ್ ಕಾರ್ಯಕಾರಿ ಸಮಿತಿ ಸದಸ್ಯ ಶಿವಬಸಪ್ಪ ಮಾತನಾಡಿ, ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಎಂ. ಗುರುಮೂರ್ತಿಯವರು ಅತ್ಯುತ್ತಮವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಯುವಕರನ್ನು ಸಂಘಟಿಸುವುದು, ಶಿಕ್ಷಣಕ್ಕೆ ಆದ್ಯತೆ ನೀಡುವುದು ಹಾಗೂ ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಅವರ 62ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದರು.

ಆಗಸ್ಟ್ 12ರ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಈ ಕಾರ್ಯಕ್ರಮವನ್ನು ಮಾಜಿ ಸಂಸದ ಆಯನೂರು ಮಂಜುನಾಥ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರ್ಗಲ್ ವಹಿಸಲಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯ ನಾನ್-ಕ್ಲಿನಿಕಲ್ ವಿಭಾಗದ ಮಹಿಳಾ ಸಿಬ್ಬಂದಿ ಹಾಗೂ ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಸೇರಿದಂತೆ ಸುಮಾರು 200 ರಿಂದ 250 ಮಹಿಳೆಯರಿಗೆ ಸೀರೆ ಮತ್ತು ತೆಂಗಿನ ಸಸಿಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor