SHIVAMOGGA NEWS TODAY

ರಂಜಾನ್ ಸಂಭ್ರಮ. ಶಿವಮೊಗ್ಗದಲ್ಲಿ ಹೇಗಿತ್ತು ಆಚರಣೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಜಿಲ್ಲೆಯಾದ್ಯಂತ ಇಂದು ರಂಜಾನ್ ಹಬ್ಬವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ನಗರದ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಹಬ್ಬದ ಆಚರಣೆಯಲ್ಲಿ ತೊಡಗಿದ್ದು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಸೌಹಾರ್ದತೆ ಮೆರೆದರು. 

ಸೈಬರ್​ ಬುಲ್ಲಿಯಿಂಗ್​ ಬಗ್ಗೆ ಶಿವಮೊಗ್ಗ ಎಸ್​ಪಿ ಪೋಸ್ಟ್! ಡಿಜಿಟಲ್ ಕಿರುಕುಳದ ಬಗ್ಗೆ ನಿಮಗೆ ಗೊತ್ತಾ!

ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಜಾಗದಲ್ಲಿ ಬೃಹತ್ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ ಸುಮಾರು 9:15ಕ್ಕೆ ಆರಂಭವಾದ ಈ ವಿಶೇಷ ನಮಾಜ್‌ನಲ್ಲಿ ಹಿರಿಯರು, ಯುವಕರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು. ನಮಾಜ್ ಮುಗಿದ ನಂತರ ಒಬ್ಬರನ್ನೊಬ್ಬರು ಪರಸ್ಪರ ಆಲಿಂಗಿಸಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡರು. 

ಹಬ್ಬದ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಜನದಟ್ಟಣೆ ಕಂಡುಬಂದಿದ್ದು, ಅಲ್ಲಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಸಾರ್ವಜನಿಕರ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಪೊಲೀಸ್ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಿತ್ತು. ಗೋಪಿ ವೃತ್ತದಿಂದ ಮಹಾವೀರ ವೃತ್ತದ ಮೂಲಕ ಡಿಸಿ ಕಚೇರಿಗೆ ಬರುವ ವಾಹನಗಳನ್ನು ದುರ್ಗಿಗುಡಿ ರಸ್ತೆಯತ್ತ ತಿರುಗಿಸಲಾಗಿತ್ತು. ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

Eid 2026 Mass Prayer at Shivamogga DC Office

Eid 2026 Mass Prayer at Shivamogga DC Office
Eid 2026 Mass Prayer at Shivamogga DC Office
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.