Elderly Couple Found Dead in Bhadravati ಭದ್ರಾವತಿ | ಇಲ್ಲಿನ ಔಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಭೂತನಗುಡಿ ಬಡಾವಣೆಯಲ್ಲಿ ವಾಸವಾಗಿದ್ದ ವೃದ್ಧ ದಂಪತಿಗಳಿಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ವಿಐಎಸ್‌ಎಲ್ ಕಾರ್ಖಾನೆಯ ನಿವೃತ್ತ ನೌಕರರಾಗಿದ್ದ 75 ವರ್ಷದ ಚಂದ್ರಪ್ಪ ಮತ್ತು ಅವರ ಪತ್ನಿ 65 ವರ್ಷದ ಜಯಮ್ಮ ಎಂದು ಗುರುತಿಸಲಾಗಿದೆ. ಮೃತದೇಹಗಳ ಮೇಲೆ ಮೇಲ್ನೋಟಕ್ಕೆ ಯಾವುದೇ ರೀತಿಯ ಹಲ್ಲೆಯಾದ ಅಥವಾ ಗಾಯದ ಗುರುತುಗಳು ಕಂಡುಬಂದಿಲ್ಲವಾದರೂ, ದಂಪತಿಯ ಶವ ಮನೆಯ ಬೇರೆ ಬೇರೆ ಕೋಣೆಗಳಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


ಭದ್ರಾವತಿ ಕೇಸ್! ದಾವಣಗೆರೆ ಹರಿಹರದ ಪ್ರತಾಪ ಅರೆಸ್ಟ್!
ಮೃತ ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ. ಎಲ್ಲರೂ ಹೊರ ಊರುಗಳಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿಯೇ ವಾಸವಿದ್ದಾರೆ.ಭೂತನಗುಡಿಯಲ್ಲಿ ವೃದ್ಧ ದಂಪತಿ ಮಾತ್ರ ವಾಸವಿದ್ದರು. ಇದೀಗ ಅವರ ಸಾವು ಸಂಭವಿಸಿದ್ದು, ಅವರನ್ನು ಹತ್ಯೆಗೈದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿರಬಹುದು ಎನ್ನುವ ಸಂಶಯ ವ್ಯಕ್ತವಾಗಿದೆ.
ಘಟನೆಯ ವಿಷಯ ತಿಳಿದ ಬೆನ್ನಲ್ಲೆ ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಥೋಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡವು ಸ್ಥಳ ಪರಿಶೀಲನೆ ನಡೆಸಿದೆ. ಅಲ್ಲದೆ ಔಲ್ಡ್ ಟೌನ್ ಪೊಲೀಸ್ ಸ್ಟೇಷನ್ನಲ್ಲಿ ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದೆ.
ಭದ್ರಾವತಿಯಲ್ಲಿ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತನ ಕಾರು ಪೀಸ್ ಪೀಸ್! Facebook Post ಕಾರಣನಾ?
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
ಭದ್ರಾವತಿ ವೃದ್ಧ ದಂಪತಿ ಸಾವು: ಹತ್ಯೆ ಶಂಕೆ, ಭೂತನಗುಡಿಯಲ್ಲಿ ಘಟನೆ Bhadravati Elderly Couple Death Elderly Couple Found Dead in Bhadravati Murder Suspected for Jewelry, Police Investigate


