ರಿಪ್ಪನ್‌ಪೇಟೆ: ವಿದ್ಯುತ್ ಮಾರ್ಗ ನಿರ್ವಹಣೆ ಮಾಡುತ್ತಿದ್ದ ಸಂದರ್ಭದಲ್ಲಿವಿದ್ಯುತ್ ಕಂಬವೊಂದು ಏಕಾಏಕಿ ಬುಡಸಮೇತ ಮುರಿದು ಬಿದ್ದ ಪರಿಣಾಮ, ಕಂಬದ ಮೇಲಿದ್ದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜವಳ್ಳಿಯಲ್ಲಿ ಸಂಭವಿಸಿದೆ.
ಮಧ್ಯಾಹ್ನ 3 ಗಂಟೆಯವರೆಗೂ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ! ವಿವರ ಓದಿ
ಮೈಸೂರು ಮೂಲದ ವಿಜಯ್ (30) ಮೃತಪಟ್ಟ ದುರ್ದೈವಿ. ನಂಜವಳ್ಳಿ ಗ್ರಾಮದಲ್ಲಿ ಹಳೆಯ ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯಕ್ಕಾಗಿ ವಿಜಯ್ ಅವರು ಲೈಟ್ ಕಂಬ ಏರಿದ್ದರು. ಈ ವೇಳೆ ಸವೆದು ಹೋಗಿದ್ದ ಹಳೆಯ ಕಂಬವು ಭಾರ ತಾಳಲಾರದೆ ಏಕಾಏಕಿ ಮುರಿದು ಬಿದ್ದಿದೆ. ಇದರ ಪರಿಣಾಮವಾಗಿ ಸುಮಾರು 20 ಅಡಿ ಎತ್ತರದಿಂದ ವಿಜಯ್ ಅವರು ನೆಲಕ್ಕೆ ಅಪ್ಪಳಿಸಿ ತೀವ್ರವಾಗಿ ಗಾಯಗೊಂಡಿದ್ದರು.
ತಕ್ಷಣವೇ ಅವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Electric Pole Collapse in Ripponpete Worker Killed

Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.