Elephant attack: ಕಾಡಾನೆ ದಾಳಿ: ಎನ್.ಆರ್.ಪುರದ ವ್ಯಕ್ತಿ ಸಾವು
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಎನ್.ಆರ್.ಪುರ ತಾಲೂಕಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದಲ್ಲಿ 65 ವರ್ಷದ ಸುಬ್ಬೇ ಗೌಡ ಅವರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಈ ಘಟನೆ, ಕಳೆದ ಗುರುವಾರ ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯೊಬ್ಬರು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ನಾಲ್ಕು ದಿನಗಳೊಳಗೆ ನಡೆದಿದೆ. ಮೇಲಿಂದ ಮೇಲೆ ನಡೆಯುತ್ತಿರುವ ಆನೆ ದಾಳಿಯ ಪ್ರಕರಣಗಳಿಂದಾಗಿ ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.