ಶಿವಮೊಗ್ಗ : ಬೆಂಗಳೂರು : ಹೊಸ ವರ್ಷ 2026 ರ ಸಂಭ್ರಮಾಚರಣೆಯ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರವಹಿಸುತ್ತಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ತುರ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲು ಮುಂದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತಂತೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆಯಲ್ಲಿ ದಿನಾಂಕ 31-12-2025 ರಿಂದ 01-01-2026 ರವರೆಗೆ ರಾಜ್ಯದ ವಿವಿಧೆಡೆ ಆಚರಣೆಗಳ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ತುರ್ತು ಸಮಯದಲ್ಲಿ ತತ್ತಕ್ಷಣದ ವೈದ್ಯಕೀಯ ನೆರವು ನೀಡುವಂತೆ ತನ್ನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದೆ.
ಜಿಲ್ಲಾ ಮಟ್ಟದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ವಿಶೇಷ ಸೂಚನೆಗಳನ್ನು ಈ ಸಂಬಂಧ ನೀಡಲಾಗಿದ್ದು ಹೊಸವರ್ಷದ ಸಂಭ್ರಮಾಚರಣೆಯ ಸಮಯದಲ್ಲಿ ಅಸ್ವಸ್ಥಗೊಳ್ಳುವ ಅಥವಾ ಅಪಘಾತಕ್ಕೀಡಾಗುವ ಸಾರ್ವಜನಿಕರಿಗಾಗಿ ಆಸ್ಪತ್ರೆಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಚಿಕಿತ್ಸಾ ಕೊಠಡಿಗಳ ವ್ಯವಸ್ಥೆ ಮಾಡುವಂತೆ ಸೂಚಿಸಿದೆ. ಅಲ್ಲದೆ ವಿಶೇಷವಾಗಿ ಮಹಿಳೆಯರ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲು ಮಹಿಳಾ ವೈದ್ಯಕೀಯ ಸಿಬ್ಬಂದಿಯನ್ನೇ ನಿಯೋಜಿಸಬೇಕು ತಿಳಿಸಲಾಗಿದೆ.
ಕೇಂದ್ರ ಸರ್ಕಾರದ ಮಹತ್ವದ ಆದೇಶ : ಜನವರಿ ಅಂತ್ಯದವರೆಗೆ ಬೆಳೆ ಖರೀದಿ! ವಿವರ ಓದಿ
Emergency Medical Protocol
- ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಸಾಗಿಸಲು ಆಂಬ್ಯುಲೆನ್ಸ್ ವಾಹನಗಳ ಸೌಲಭ್ಯ ಸದಾ ಸಿದ್ಧವಿರಬೇಕು
- ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ದಾಸ್ತಾನು ಲಭ್ಯವಿರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು
- ಸಾರ್ವಜನಿಕರಿಗೆ ಯಾವುದೇ ಹಂತದಲ್ಲಿ ಚಿಕಿತ್ಸೆಯ ಕೊರತೆಯಾಗದಂತೆ ಮತ್ತು ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧವಾಗಿರಬೇಕು ಎಂದು ತಿಳಿಸಿದೆ.


ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!