ಮಾ.12 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ

Entrance test for residential schools to be held on March 12

ಮಾ.12 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ
ಮಾ.12 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗ  ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಮಾ.12 ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

READ |ಬಾಯಿ ಬಾರದ ಮಗಳ ಜೊತೆ, ಬಿಸಿಲಲ್ಲಿ ಅಡಿಗೆ ಮಾಡುತ್ತಿದ್ದೇನೆ! ಒಡೆದು ಹಾಕಿದ ಮನೆ ಪುನಃ ಕಟ್ಟಿಕೊಡಿ! ಶಿವಮೊಗ್ಗದ ಬಡಮಹಿಳೆಯ ಅನಾಗರಿಕ ಬದುಕಿಗೆ ನ್ಯಾಯ ಒದಗಿಸಬೇಕಿದೆ ಜಿಲ್ಲಾಡಳಿತ

  •      ಮಾ.03 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
  •      ಮಾ.12 ರ ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 6045 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. 
  •     ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯರ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

READ | ಫೋಟೋ ಕ್ಲಿಕ್ಕಿಸುವಾಗ ಇರಲಿ ಎಚ್ಚರ! ಬದುಕಿಗೆ ಕಂಟಕವಾಗಬಲ್ಲದು ಒಂದೇ ಒಂದು ಇಮೇಜ್​! ಸೈಬರ್​ ಕ್ರೈಂ ಅಲರ್ಟ್!

ಪರೀಕ್ಷೆ ಕರ್ತವ್ಯಕ್ಕೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಪರಿವೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಯಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈಗಲೇ ಆಸನಗಳು, ಮೂಲಭೂತ ಸೌಕರ್ಯಗಳ ಕುರಿತು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸಬೇಕು. ಹಾಗೂ ಪರೀಕ್ಷಾ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಎಡೆಮಾಡದೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು, ಸಿದ್ದವಾಗಿರುವಂತೆ ಸೂಚನೆ ನೀಡಿದರು.     ಡಿಡಿಪಿಯು ಬಿ.ಕೃಷ್ಣಪ್ಪ, ಪರೀಕ್ಷಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಯ ಅಧಿಕಾರಿಗಳು ಹಾಜರಿದ್ದರು.

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #