POLITICS

ದಾವಣಗೆರೆ ಚುನಾವಣೆಯಿಂದ ಮುಸಲ್ಮಾನರಿಗೆ ಸತ್ಯ ತಿಳಿಯಿತು, ಕೆಎಸ್​ ಈಶ್ವರಪ್ಪ?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಯಾವಾಗ ಕಾಂಗ್ರೆಸ್ ಸರ್ಕಾರ ದಾವಣಗೆರೆ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್​ ನೀಡಲಿಲ್ಲವೋ ಆಗಲೇ ಮುಸಲ್ಮಾನರಿಗೆ ತಿಳಿಯಿತು ಕಾಂಗ್ರೆಸ್​ ಸರ್ಕಾರ ನಮ್ಮನ್ನು ಬಳಸಿಕೊಳ್ಳುತ್ತಿರುವುದು ಕೇವಲ ಓಟಿಗಾಗಿ ಮಾತ್ರ ಎಂದು ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಶಿವಮೊಗ್ಗದ ಸೂಗೂರಿನಲ್ಲಿ ಆರು ಕಾಲುಗಳ ಕರುವಿನ ಜನನ!

ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಂದು ಅಸಂಖ್ಯಾತ ಸಮಸ್ಯೆಗಳಿವೆ, ಈ ವಿಷಯ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೂ ತಿಳಿದಿದೆ. ಆದರೆ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ, ಡಿ.ಕೆ. ಶಿವಕುಮಾರ್ ಅವರು ಸಿಎಂ ಪಟ್ಟಕ್ಕೇರಲು ಹಾತೊರೆಯುತ್ತಿದ್ದಾರೆ. ಈ ಅಧಿಕಾರದ ಹಪಾಹಪಿಯಲ್ಲಿ ರಾಜ್ಯದ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಲ್ಪಟ್ಟಿದೆ ಎಂದು ಕಿಡಿಕಾರಿದರು. 

ದಾವಣಗೆರೆ ಉಪಚುನಾವಣೆಯ ಟಿಕೆಟ್ ಹಂಚಿಕೆ ಕುರಿತು ಮಾತನಾಡಿದ ಅವರು, ಅಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯವಿತ್ತು. ಆದರೆ ಕಾಂಗ್ರೆಸ್ ನಡೆ ಮುಸ್ಲಿಂ ನಾಯಕರಿಗೆ ನಿರಾಸೆ ತಂದಿದೆ. ಮುಸಲ್ಮಾನರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುವ ಕಾಂಗ್ರೆಸ್ ಅಸಲಿ ಮುಖ ಈಗ ಬಯಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವವೇ ಮುಸ್ಲಿಂ ಮತಗಳ ಮೇಲೆ ನಿಂತಿದೆ, ಆದರೆ ಈಗಿನ ಬೆಳವಣಿಗೆಗಳಿಂದ ಕಾಂಗ್ರೆಸ್ ಪಕ್ಷ ಛಿದ್ರವಾಗುವ ಕಾಲ ಹತ್ತಿರ ಬಂದಿದೆ. ಮುಂದಿನ ಎರಡು ತಿಂಗಳಲ್ಲಿ ಕರ್ನಾಟಕ ರಾಜಕಾರಣದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಲಿವೆ ಎಂದು ಭವಿಷ್ಯ ನುಡಿದರು.

ಇದೇ ವೇಳೆ ಮಹಿಳಾ ಮೀಸಲಾತಿ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಈ ನಿರ್ಧಾರವನ್ನು ತಾವು ಸಂಪೂರ್ಣವಾಗಿ ಸ್ವಾಗತಿಸುವುದಾಗಿ ತಿಳಿಸಿದರು. ಸ್ವಾತಂತ್ರ್ಯ ಪೂರ್ವದಿಂದಲೂ ಮಹಿಳೆಯರು ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂದಿರಾಗಾಂಧಿ, ಸುಷ್ಮಾ ಸ್ವರಾಜ್ ಅವರಂತಹ ನಾಯಕಿಯರು ದೇಶವನ್ನೇ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಮನೆಯನ್ನೇ ಅಚ್ಚುಕಟ್ಟಾಗಿ ನಿರ್ವಹಿಸುವ ಮಹಿಳೆಯರಿಗೆ ದೇಶವನ್ನು ಮುನ್ನಡೆಸುವ ಶಕ್ತಿ ಇದೆ ಎಂದು ಅವರು ಶ್ಲಾಘಿಸಿದರು. 

Eshwarappa Slams Congress Over Davangere Ticket

Eshwarappa Slams Congress Over Davangere Ticke
Eshwarappa Slams Congress Over Davangere Ticket
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.