ಶಿವಮೊಗ್ಗ : ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿರುವ ವ್ಯಕ್ತಿಯೊಬ್ಬರಿಗೆ ಸೇರಿದ ಶೆಡ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಡಿಸೆಂಬರ್ 10 ರಂದು ದಿಢೀರ್ ದಾಳಿ ನಡೆಸಿದರು. ಈ ವೇಳೆ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಲಾಗಿದ್ದ ಒಟ್ಟು 51.75 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ದಾಳಿಯ ಸಂದರ್ಭದಲ್ಲಿ, ಆರೋಪಿಯನ್ನು ಸ್ಥಳದಲ್ಲೇ ದಸ್ತಗಿರಿ ಮಾಡಲಾಗಿದೆ ಮತ್ತು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಅಬಕಾರಿ ನಿರೀಕ್ಷಕ ಶ್ರೀನಾಥ್ ಆರ್. ಅವರ ನೇತೃತ್ವದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪುಟ್ಟಪ್ಪ (ಅ.ಉ.ನಿ), ಶಿವಮೂರ್ತಿ ನಾಯ್ಕ್, ಗಣಪತಿ ಮತ್ತು ಅರ್ಜುನ್ ಅವರು ಭಾಗವಹಿಸಿದ್ದರು.
Excise Raid in Shivamogga Seizes 51.75 Liters Liquor


