Exclusive / ಸಾಗರ ಟೌನ್​ನಲ್ಲಿ ನಡೆದ ಭೀಕರ ಲಾರಿ ಅಪಘಾತ ಸಂಭವಿಸಿದ್ದೇಗೆ ನೋಡಿ ಸಿ.ಸಿ.ಟಿವಿ ವಿಡಿಯೋದಲ್ಲಿ!

ನಿನ್ನೆ ಸಾಗರ ಟೌನ್​ ಸಮೀಪ, ಜಲ್ಲಿ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿತ್ತು. ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು, ಈ ಪೈಕಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದರು.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ನಿನ್ನೆ ಬೆಳಗ್ಗೆಯೇ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್​ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. 

ಘಟನೆ ನಡೆದಿದ್ದು ಹೇಗೆ ಎಂಬುದರ ವಿವರ ಇಲ್ಲಿದೆ ಓದಿ : ಸಾಗರ ಟೌನ್​ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ

ಇದೀಗ ಘಟನೆಯ ಸಿಸಿ ಟಿವಿ ದೃಶ್ಯವೊಂದು ಲಭ್ಯವಾಗಿದ್ದು, ದೃಶ್ಯದಲ್ಲಿ ಟ್ರಾಫಿಕ್​ನ ನಡುವೆ ಲೆಫ್ಟ್​ನಲ್ಲಿಯೇ ನುಗ್ಗಿ ಬಂದ ಲಾರಿ, ತಮ್ಮ ಪಾಡಿಗೆ ರಸ್ತೆ ಬದಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿರುವ ದೃಶ್ಯ  ಸೆರಯಾಗಿದೆ. 

ಘಟನೆ ನಡೆದಿದ್ದು ಹೇಗೆ ಎಂಬುದರ ವಿವರ ಇಲ್ಲಿದೆ ಓದಿ : ಸಾಗರ ಟೌನ್​ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ

ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ/ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ