ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 22 2025 : ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಗಲಕೋಟೆಯ ಸುದ್ದಿಯೊಂದು ದೊಡ್ಡಮಟ್ಟಿಗೆ ಸದ್ದು ಮಾಡುತ್ತಿದೆ. ಇಲ್ಲಿನ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಸಂಬಂಧಿಸಿದಂತೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಿನ್ನೆ ದಿನ ಭಾನುವಾರ ನಡೆದ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ವಾಮೀಜಿ ಅವರು ಟ್ರಸ್ಟ್ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದು, ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಅಂತಿಮವಾಗಿ ಟ್ರಸ್ಟಿಗಳು ಮತ್ತು ಸಮಾಜದ ಪ್ರಮುಖ ಮುಖಂಡರ ಸರ್ವಾನುಮತದ ಒಪ್ಪಿಗೆಯೊಂದಿಗೆ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪೀಠದ ಪಾವಿತ್ರ್ಯತೆ ಮತ್ತು ನಿಯಮಗಳನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದವರು ತಿಳಿಸಿದ್ದು, ಸದ್ಯದ ಬೆಳವಣಿಗೆ ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ.
Lingayat Panchamasali Peetha Expel Jayamruthyunjaya Swamiji from Post
Jayamrutyunjaya Swamiji expelled, Lingayat Panchamasali Peetha, Kudala Sangama news, All India Lingayat Panchamasali Trust,Jayamrutyunjaya Swamiji, Kudala Sangama Peetha, Neelkant Asuti, Malenadutoday news, ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಪೀಠ, ಕೂಡಲಸಂಗಮ, ಸ್ವಾಮೀಜಿ ಉಚ್ಚಾಟನೆ, ಲಿಂಗಾಯತ ಪಂಚಮಸಾಲಿ ಟ್ರಸ್ಟ್, ಬಾಗಲಕೋಟೆ ಸುದ್ದಿ, ನೀಲಕಂಠ ಅಸೂಟಿ ,Lingayat Panchamasali Peetha Expel Jayamruthyunjaya Swamiji from Post
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!