ಮೆಕ್ಕೆಜೋಳ ಕಟಾವಿನ ವೇಳೆ ಹೆಜ್ಜೇನು ದಾಳಿ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಸಾವು

ಹಂಚಿಕೊಳ್ಳಿ
WhatsApp Facebook X Telegram
ಮೆಕ್ಕೆಜೋಳ ಕಟಾವಿನ ವೇಳೆ ಹೆಜ್ಜೇನು ದಾಳಿ; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಸಾವು

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಮೆಕ್ಕೆಜೋಳ ಕಟಾವು ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿಗೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ. ಮಲವಗೊಪ್ಪದ ತಿಮ್ಮನಾಯ್ಕ (65) ಮೃತಪಟ್ಟ ರೈತ.

ಬುಧವಾರ ಸಂಜೆ ತಿಮ್ಮನಾಯ್ಕ ಅವರು ತಮ್ಮದೇ ಹೊಲದಲ್ಲಿ ಮೆಕ್ಕೆಜೋಳ ಕಟಾವು ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದವು.ಹೆಜ್ಜೇನುಗಳ ದಾಳಿಯಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ತಿಮ್ಮನಾಯ್ಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಸಂಜೆ ಮೃತಪಟ್ಟಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor