ಆನಂದಪುರ: ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ಮಂಗಳವಾರ ನಾಗರಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ್ದಾನೆ. ಮೃತ ರೈತನನ್ನು 40 ವರ್ಷದ ವೀರೇಶ್ ಎಂದು ಗುರುತಿಸಲಾಗಿದೆ.
ವೀರೇಶ್ ಅವರು ತಮ್ಮ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿದೆ. ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಪರಿಶೀಲಿಸಿದ ನಂತರ ವೀರೇಶ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಈ ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.